ಪಂಜಾಬ್ : ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಪಂಜಾಬಿನಾದ್ಯಂತ ಹಲವು ಕಾರ್ಮಿಕ ಸಂಘಟನೆಗಳ ಅಪಾರ ಸಂಖ್ಯೆಯ ಕಾರ್ಮಿಕರು ಮುಖ್ಯಮಂತ್ರಿ ಭಗವಂತ್ ಮಾನ್ ಅವರ ನಿವಾಸದ ಹೊರಗೆ ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಮೊದಲಿಗೆ ಪಟಿಯಾಲ ಬೈಪಾಸ್ಗೆ ಆಗಮಿಸಿದ ಕಾರ್ಯಕರ್ತರು ಸಂಗ್ರೂರ್ನಲ್ಲಿರುವ ಸಿಎಂ ನಿವಾಸದತ್ತ ಪಾದಯಾತ್ರೆ ನಡೆಸಿದರು. ಭಗವಂತ್ ಮಾನ್ ಅವರ ಮನೆಯ ಹೊರಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
#WATCH | Punjab Police lathi-charged Mazdoor Union people who were marching towards CM Bhagwant Mann's residence in Sangrur regarding their various demands pic.twitter.com/MkpxdNSNQf
— ANI (@ANI) November 30, 2022
ಇತ್ತ ಕಾರ್ಮಿಕರ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಕೆಲ ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕಾರ್ಮಿಕರು ಈಗ ಗೇಟ್ನ ಹೊರಗೆ ಧರಣಿ ಆರಂಭಿಸಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.