ದಾವಣಗೆರೆ: ಹೊನ್ನಾಳಿ ತಾಲೂಕು ಕತ್ತಿಗೆ ಗ್ರಾಮದಲ್ಲಿ ದೇವಸ್ಥಾನದ ಅರ್ಚಕರೊಬ್ಬರು ದೇವರಿಗೆ ವಿಚಿತ್ರ ಪೂಜೆ ಮಾಡಿದ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಆಂಜನೇಯನ ಮೂರ್ತಿ ಮೇಲೆ ಕಾಲಿಟ್ಟು ಅಭಿಷೇಕ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ರಾಜ್ಯದಲ್ಲಿ ಈ ವಿಚಾರ ಭುಗಿಲೆದ್ದ ಬೆನ್ನಲ್ಲೇ ಇದೀಗ ಅರ್ಚಕ ಎಚ್ಚೆತ್ತುಕೊಂಡು ಕ್ಷಮೆಯಾಚಿಸಿದ್ದಾನೆ . ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಬಳ್ಳೂರ ಗ್ರಾಮದ ಆಂಜನೇಯ ಸ್ವಾಮೀ ದೇವಸ್ಥಾನದಲ್ಲಿ ಮಹೇಶ್ವರಯ್ಯ ಸ್ವಾಮಿ ದೇವರ ಮೂರ್ತಿ ಮೇಲೆ ಕಾಲಿಟ್ಟು ಪೂಜೆ ಮಾಡಿದ್ದನು. ಈ ಬೆನ್ನಲ್ಲೇ ಆಂಜನೇಯ ಸ್ವಾಮೀ ದೇವಸ್ಥಾನದ ಅರ್ಚಕ ಮಹೇಶ್ವರಯ್ಯ ಸ್ವಾಮಿ, ನನ್ನಿಂದ ತಪ್ಪಾಗಿದೆ. ಕ್ಷಮೆಯಾಚಿಸಿ. ಅದೊಂದು ಸಂಪ್ರದಾಯ ಅಂತಾ ಮಾಡಿದ್ದೆ. ನನ್ನಿಂದ ತಪ್ಪಾಗಿದೆ. ಕ್ಷಮಿಸಿ ಎಂದಿದ್ದಾರೆ.
ದೇವರ ತಲೆ ಮೇಲೆ ಕಾಲಿಟ್ಟು ಪೂಜೆ ಮಾಡುವ ಮೂಲಕ ಜನರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ದೇವರಿಗೆ ಪೂಜೆ ಮಾಡುವ ಅರ್ಚಕನೇ ರೀತಿ ಮಾಡಿದ್ರೆ ಹೇಗೆ? ಎಂದು ಜನಸಾಮನ್ಯರು ಪ್ರಶ್ನೆ ಮಾಡುತ್ತಿದ್ದಾರೆ. ಹೊನ್ನಾಳಿ ತಾಲೂಕಿನ ಕತ್ತಿಗೆ ಗ್ರಾಮದ ಮಹೇಶ್ವರಯ್ಯ ಎಂಬ ಅರ್ಚಕ ವಿಚಿತ್ರ ಪೂಜೆಯಿಂದ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಬೇಡರ ಕಣ್ಣಪ್ಪ ಶಿವನಿಗೆ ಒಂದು ಕಣ್ಣು ದಾನ ಕೊಟ್ಟು ಇನ್ನೊಂದು ಕಣ್ಣು ಕೊಡಲು ಶಿವಲಿಂಗದ ಮೇಲೆ ಕಾಲಿಡುವಂತೆ ಈ ಅರ್ಚಕ ಮಹೇಶ್ವರಯ್ಯ, ಆಂಜನೇಯ ಸ್ವಾಮೀ ತಲೆ ಮೇಲೆ ಕಾಲಿಟ್ಟು ಪೂಜೆ ಮಾಡುತ್ತಾರೆ. ಅರ್ಚಕನ ಪೂಜೆ ವಿಧಾನದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿದ ಅನೇಕರು ಅರ್ಚಕನ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
Job Alert: ‘ಬೆಂಗಳೂರು ವಿವಿ’ಯಲ್ಲಿ ಖಾಲಿ ಇರುವ ‘ಅತಿಥಿ ಉಪನ್ಯಾಸಕ’ರ ಹುದ್ದೆಗೆ ಅರ್ಜಿ ಆಹ್ವಾನ
ಸೂರ್ಯಗ್ರಹಣ ಎಫೆಕ್ಟ್ : ನಾಳೆ ‘ಚಾಮುಂಡಿ ಬೆಟ್ಟ’ಕ್ಕೆ ಭಕ್ತರ ಪ್ರವೇಶ ನಿರ್ಬಂಧ |Chamundi Hills