ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಂತ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು, ಇಂದು ಭಗವಂತನ ಹೆಸರಿನಲ್ಲಿ ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.
ಇಂದು ವಿಧಾನಪರಿಷತ್ ಕಲಾಪ ಆರಂಭಕ್ಕೂ ಮುನ್ನಾ ನೂತನ ಸದಸ್ಯ ಪುಟ್ಟಣ್ಣಗೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಮಾಣವಚನ ಬೋಧಿಸಿದರು. ಈ ವೇಳೆ ಪುಟ್ಟಣ್ಣ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಈ ಬಳಿಕ ಮಾತನಾಡಿದಂತ ಅವರು, ವಿಧಾನಪರಿಷತ್ ಉಪ ಚುನಾವಣೆಯ ಫಲಿತಾಂಶ ಮುಂದಿನ ಚುನಾವಣೆಗೆ ದಿಕ್ಸೂಚಿಯಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯಾದರೂ ಶಿಕ್ಷಕರ ಕ್ಷೇತ್ರದಲ್ಲಿ ಸೋಲು ಕಂಡಿದೆ. ಮುಂದಿನ ಚುನಾವಣೆಗೂ ಈ ಫಲಿತಾಂಶ ಮಾರ್ಗಸೂಚಿಯಾಗಲಿದೆ ಎಂದರು.
ಅಂದಹಾಗೆ ನಿನ್ನೆ ವಿಧಾನಪರಿಷತ್ ಉಪ ಚನಾವಣೆಯ ಮತಏಣಿಕೆಯ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ 1506 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎ.ಪಿ ರಂಗನಾಥ್ ಸೋಲು ಕಂಡಿದ್ದರು.