ಪುತ್ತೂರು : ಜಿಲ್ಲಾಡಳಿತ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಂಡಿದೆ. ಇದೇ ಕಾರಣ ಮುಂದಿಟ್ಟುಕೊಂಡು ಈಗಾಗಲೇ ಜಿಲ್ಲೆಯಲ್ಲಿ ಹಲವು ಕ್ರಿಮಿನಲ್ ಹಿನ್ನಲೆಯ ವ್ಯಕ್ತಿಗಳನ್ನು ಗಡಿಪಾರು ಮಾಡಲಾಗಿದೆ. ಕ್ರಿಮಿನಲ್ ಹಿನ್ನೆಲೆ ಇದ್ದ ಹಿಂದೂ ಸಂಘಟನೆಯ ಹಲವು ಯುವಕರನ್ನು ಈಗಾಗಲೇ ಬೇರೆ ಜಿಲ್ಲೆಗಳಿಗೆ ಗಡಿಪಾರು ಮಾಡಲಾಗಿದೆ. ಇದೀಗ ಪುತ್ತೂರು ತಾಲೂಕಿನ ಮತ್ತೋರ್ವ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಪುತ್ತೂರು ಸಹಾಯಕ ಆಯುಕ್ತರು ನಾಳೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪುರಷರಕಟ್ಟೆ ನಿವಾಸಿಯಾಗಿರೋ ಅವಿನಾಶ್‌ಗೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸರ ಮೂಲಕ ಅವಿನಾಶ್‌ಗೆ ನೋಟಿಸೂ ನೀಡಲಾಗಿದ್ದು, ಗಡಿಪಾರಿನ ಉಲ್ಲೇಖ ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ನಿಟ್ಟಿನಲ್ಲಿ ಅವಿನಾಶ್ ನನ್ನು ಯಾಕೆ ಗಡಿಪಾರು ಮಾಡಬಾರದು ಎಂದು ಕೇಳಲಾಗಿದ್ದು ಅದಕ್ಕೆ ಉತ್ತರಿಸಲು ನಾಳೆಯ ವರೆಗೆ ಅವಕಾಶ ನೀಡಲಾಗಿದೆ. ಒಂದು ವೇಳೆ ಅವಿನಾಶ್ ವಿಚಾರಣೆಗೆ ಹಾಜರಾಗದೇ ಇದ್ದಲ್ಲಿ ಅವರನ್ನು ಬೀದರ್ ಜಿಲ್ಲೆಗೆ ಗಡಿಪಾರು ಮಾಡುವ ಏಕ ಪಕ್ಷೀಯ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆಯಾಗಿದೆ.

Share.
Exit mobile version