ಶಿವಮೊಗ್ಗ: ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರ ಜೀವನದಲ್ಲಿ ಆರ್ಥಿಕ ಸ್ವಾವಲಂಭನೆಯ ಜೊತೆಗೆ ಅವರ ಜೀವನ ಗುಣಮಟ್ಟವನ್ನು ಸುಧಾರಿಸುತ್ತಿದೆ ಎಂದು ಗ್ಯಾರಂಟಿ ಯೋಜನೆಯ ತಾಲ್ಲೂಕು ಘಟಕದ ಅಧ್ಯಕ್ಷ ಮಧು ಎಚ್.ಎಂ. ತಿಳಿಸಿದರು.
ಶಿವಮೊಗ್ಗ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಹತ್ವಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಯಶಸ್ವಿಯಾಗಿ ಜಾರಿಯಾಗಿದ್ದು, ಇದರಲ್ಲಿ ಅನ್ನಭಾಗ್ಯ ಯೋಜನೆಯು ಹಸಿವು ಮುಕ್ತ ಜಿಲ್ಲೆಯನ್ನಾಗಿಸಲು ಸಹಕಾರಿಯಾಗಿದೆ ಎಂದರು. ಬಡವರ ಆಶಾಕಿರಣವಾಗಿರುವ ಅನ್ನಭಾಗ್ಯ ಯೋಜನೆಯು ಹಸಿವು ಮುಕ್ತ ಭಾರತ ಮತ್ತು “ಸುಸ್ಥಿರ ಅಭಿವೃದ್ಧಿ ಗುರಿ 2030” ತಲುಪಲು ಸಹಕಾರಿಯಾಗಿದೆ ಎಂದರು. 1.20 ಲಕ್ಷ ವಾರ್ಷಿಕ ಆದಾಯ ಹೊಂದಿರುವ ಅಥವಾ ಐ.ಟಿ. ಪಾವತಿ ಮಾಡುತ್ತಿರುವ ಕುಟುಂಬಗಳ ಬಿ.ಪಿ.ಎಲ್. ಕಾರ್ಡುಗಳನ್ನು ಅನರ್ಹ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಮಹಿಳೆಯರ ಸಬಲೀಕರಣ ಮಾಡಲು ಸಹಕಾರಿಯಾಗಿರುವ ಗೃಹಲಕ್ಷ್ಮೀ ಯೋಜನೆಯ ಹಣವು ಜೂನ್-25 ಮಾಹೆಯವರೆಗೆ ಬಿಡುಗಡೆಯಾಗಿದೆ, 2044 ಐಟಿ, ಜಿ.ಎಸ್.ಟಿ. ಫಲಾನುಭವಿಗಳಿದ್ದು, ಪ್ರಸ್ತುತ 85 ಫಲಾನುಭವಿಗಳ ಎನ್.ಪಿ.ಸಿ.ಎಲ್. ಬಾಕಿಯಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ತಾರಾ ತಿಳಿಸಿದರು.
ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಜಿಲ್ಲೆಯ ಎಲ್ಲಾ ಕುಟುಂಬಗಳಿಗೆ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುತ್ತಿದ್ದು, ಈ ಯೋಜನೆಯ ಮೂಲಕ 7.5 ಲಕ್ಷ ಕೋಟಿ ಹಣವನ್ನು ಸಬ್ಸಿಡಿಯಾಗಿ ಕೊಡಲಾಗಿರುತ್ತದೆ, ಗೃಹಜ್ಯೋತಿ ಯೋಜನೆಯಿಂದ ಎಲ್ಲಾ ಮನೆಗಳಿಗೂ ಕೂಡಾ ಬೆಳಕು ಕೊಡುವಂತಹ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಯುವನಿಧಿ ಯೋಜನೆಯಡಿಯಲ್ಲಿ 2.95 ಲಕ್ಷ ಕೋಟಿ ಹಣ ಬಿಡುಗಡೆಯಾಗಿರುತ್ತದೆ, ಹೊಸದಾಗಿ 2024-25 ನೇ ಸಾಲಿನಲ್ಲಿ ಉತ್ತೀರ್ಣವಾಗಿರುವ ವಿದ್ಯಾರ್ಥಿಗಳನ್ನು ನೋಂದಣಿ ಮಾಡಿಸುವಂತೆ ತಿಳಿಸಿದರು. ಶಕ್ತಿ ಯೋಜನೆಯ ಮೂಲಕ ಆಗಸ್ಟ್ ಮಾಹೆಯಲ್ಲಿ ಒಟ್ಟು 88 ಲಕ್ಷ ಮಹಿಳೆಯರು ಪ್ರಯಾಣ ಮಾಡಿದ್ದು, ಶೇಕಡ 37 ರಷ್ಟು ಆದಾಯವಾಗಿರುತ್ತದೆ.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ರಾಹುಲ್ ಹಾಗೂ ತಾಲ್ಲೂಕು ಗ್ಯಾರಂಟಿ ಯೋಜನೆಯ ಸಮಿತಿ ಸದಸ್ಯರುಗಳು ಹಾಜರಿದ್ದರು.
ಲೀಡ್ ಬ್ಯಾಂಕ್‌ಗಳು ಗ್ರಾಮೀಣ ಮಟ್ಟದಲ್ಲಿ ಹೊಸ ಶಾಖೆಗಳನ್ನು ತೆರೆಯಬೇಕು: ಶಿವಮೊಗ್ಗ ಜಿ.ಪಂ ಸಿಇಓ ಎನ್.ಹೇಮಂತ್