ವಾಷಿಂಗ್ಟನ್: ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್ ಕಾರ್ಯಕ್ರಮದಲ್ಲಿ ಸಂಭವಿಸಿದ ಗುಂಡಿನ ಚಕಮಕಿಯ ನಂತರ ಸುರಕ್ಷಿತವಾಗಿ ಹೊರಬಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಘಟನೆಯ ಬಗ್ಗೆ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. “ಅದೊಂದು ವಿಚಿತ್ರ ಮತ್ತು ಅಚ್ಚರಿಯ ಸಂಜೆ (Quite An Evening)” ಎಂದು ಬಣ್ಣಿಸಿರುವ ಅವರು, ಭದ್ರತಾ ಪಡೆಗಳ ಕ್ಷಿಪ್ರ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದಾರೆ.
ಘಟನೆಯ ನಂತರ ತಮ್ಮ ‘ಟ್ರೂತ್ ಸೋಶಿಯಲ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ಟ್ರಂಪ್,”ಗುಂಡು ಹಾರಿಸಿದ ವ್ಯಕ್ತಿಯನ್ನು ಸೀಕ್ರೆಟ್ ಸರ್ವಿಸ್ ಏಜೆಂಟ್‌ಗಳು ತಕ್ಷಣವೇ ಬಂಧಿಸಿದ್ದಾರೆ. ಪರಿಸ್ಥಿತಿ ಈಗ ಹತೋಟಿಯಲ್ಲಿದೆ” ಎಂದು ತಿಳಿಸಿದ್ದಾರೆ.
ಅಧ್ಯಕ್ಷರನ್ನು ರಕ್ಷಿಸಲು ಪ್ರಾಣದ ಹಂಗು ತೊರೆದು ಕಾರ್ಯನಿರ್ವಹಿಸಿದ ಸೀಕ್ರೆಟ್ ಸರ್ವಿಸ್ ಮತ್ತು ವಾಷಿಂಗ್ಟನ್ ಪೊಲೀಸರಿಗೆ ಟ್ರಂಪ್ ಕೃತಜ್ಞತೆ ಸಲ್ಲಿಸಿದ್ದಾರೆ.”ಯಾವುದೇ ಶಕ್ತಿ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ನಾವು ಸುರಕ್ಷಿತವಾಗಿದ್ದೇವೆ ಮತ್ತು ಅಮೆರಿಕದ ಹಿತಾಸಕ್ತಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ” ಎಂದು ಬೆಂಬಲಿಗರಿಗೆ ಧೈರ್ಯ ತುಂಬಿದ್ದಾರೆ.








