Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂಡೋನೇಷ್ಯಾ ವಿಮಾನ ನಿಲ್ದಾಣದಲ್ಲಿ ಭಾರೀ ಅವಾಂತರ: ಸೋಕರ್ನೋ-ಹಟ್ಟಾ ಟರ್ಮಿನಲ್ 3ರ ಚಾವಣಿ ಕುಸಿತ; ಜೀವ ಉಳಿಸಿಕೊಳ್ಳಲು ಪ್ರಯಾಣಿಕರ ಪರದಾಟ!

07/04/2026 9:43 AM

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid

07/04/2026 9:38 AM

ಮಹಿಳೆಯರೇ ಗಮನಿಸಿ : ನಿಮ್ಮ ಸುರಕ್ಷತೆಗಾಗಿ ಬ್ಯಾಗ್ ನಲ್ಲಿ ಇಟ್ಟುಕೊಳ್ಳಲೇಬೇಕು ಈ 5 ಅಗತ್ಯ ವಸ್ತುಗಳು.!

07/04/2026 9:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಟಾಸ್ಕ್‌ ಫೋರ್ಸ್‌ ರಚಿಸಿ: ಆರ್‌.ಅಶೋಕ ಆಗ್ರಹ
KARNATAKA

ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಟಾಸ್ಕ್‌ ಫೋರ್ಸ್‌ ರಚಿಸಿ: ಆರ್‌.ಅಶೋಕ ಆಗ್ರಹ

By kannadanewsnow0910/09/2024 2:18 PM

ಬೆಂಗಳೂರು: ಭಯೋತ್ಪಾದಕರು ಬಿಜೆಪಿ ಕಚೇರಿಯಲ್ಲಿ ಬಾಂಬ್‌ ಸ್ಫೋಟಿಸುವ ಸಂಚು ಮಾಡಿದ್ದು ಅತ್ಯಂತ ಖಂಡನೀಯ. ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ಕಾಂಗ್ರೆಸ್‌ ಸರ್ಕಾರ ವಿಶೇಷ ಟಾಸ್ಕ್‌ ಫೋರ್ಸ್‌ ರಚಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ, ಬಿಟಿ ರಾಜಧಾನಿ ಬೆಂಗಳೂರಿನಲ್ಲಿ ಭಯದ ವಾತಾವರಣ ಸೃಷ್ಟಿಸಿ ಆರ್ಥಿಕತೆಯನ್ನು ನಾಶ ಮಾಡಬೇಕೆಂದು ಭಯೋತ್ಪಾದಕರು ಯೋಜನೆ ರೂಪಿಸಿದ್ದರು. ಇದಕ್ಕೆ ಪೂರಕವಾಗಿ ಕಾಂಗ್ರೆಸ್‌ನ ವಿಧಾನಪರಿಷತ್‌ ಸದಸ್ಯರೊಬ್ಬರು, ಬಾಂಗ್ಲಾ ಮಾದರಿ ಹಲ್ಲೆ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದರು. ಬಾಂಗ್ಲಾದೇಶದಿಂದಲೂ ಹಲವರು ಆಧಾರ್‌ ಕಾರ್ಡ್‌ ಪಡೆದು ಬೆಂಗಳೂರಿಗೆ ಬರುತ್ತಿದ್ದಾರೆ. ಇದರಿಂದ ಭಯೋತ್ಪಾದನಾ ಚಟುವಟಿಕೆ ಹೆಚ್ಚುತ್ತಿದೆ. ರಾಜ್ಯ ಗೃಹ ಇಲಾಖೆ ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ವಿಶೇಷ ಟಾಸ್ಕ್‌ ಫೋರ್ಸ್‌ ರಚಿಸಬೇಕು ಎಂದು ಆಗ್ರಹಿಸಿದರು.

ರಾಜ್ಯಕ್ಕೆ ನುಸುಳುವ ಬಾಂಗ್ಲಾ ಪ್ರಜೆಗಳನ್ನು ಕೂಡಲೇ ಪತ್ತೆ ಮಾಡಿ ಅವರನ್ನು ಹೊರಕ್ಕೆ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿದೆ. ಇಲ್ಲವಾದರೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಸ್ಥಿತಿಯೇ ರಾಜ್ಯಕ್ಕೂ ಬರಲಿದೆ. ನಮ್ಮ ರಾಜ್ಯದ ಜನರ ಬದುಕು ಭಯೋತ್ಪಾದಕರ ನಿಯಂತ್ರಣಕ್ಕೆ ಹೋಗಬಾರದು. ಸ್ಲೀಪರ್‌ ಸೆಲ್‌ಗಳನ್ನು ಪತ್ತೆ ಮಾಡುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಒತ್ತಾಯಿಸಿದರು.

ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಕಾಂಗ್ರೆಸ್‌ ಸಚಿವರು ನಿರಾಕರಿಸಿದ್ದರು. ಪದೇ ಪದೆ ಭಯೋತ್ಪಾದಕರಿಗೆ ಪ್ರೇರಣೆಯಾಗುವ ಹೇಳಿಕೆಗಳನ್ನು ಕಾಂಗ್ರೆಸ್‌ ನಾಯಕರು ನೀಡಿದ್ದಾರೆ. ಇದರಿಂದಾಗಿ ಭಯೋತ್ಪಾದನೆಗೆ ಕುಮ್ಮಕ್ಕು ದೊರೆತಿದೆ. ಕರ್ನಾಟಕದಲ್ಲೇ ಭಯೋತ್ಪಾದನೆ ಮಾಡಿದರೆ ಏನೂ ತೊಂದರೆ ಇಲ್ಲ ಎಂದು ಭಯೋತ್ಪಾದಕರಿಗೆ ಅನ್ನಿಸಿದೆ. ಇದಕ್ಕಾಗಿ ಇಲ್ಲಿ ಹೆಚ್ಚು ಉಗ್ರ ಚಟುವಟಿಕೆ ನಡೆಯುತ್ತಿದೆ ಎಂದು ದೂರಿದರು.

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದಕರಿಗೆ ಭಯವೇ ಇಲ್ಲ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟವಾದಾಗ, ಇದು ವ್ಯಾಪಾರ ವ್ಯಾಜ್ಯ ಎಂದು ಸಚಿವರು ಹೇಳಿದ್ದರು. ಇದರಿಂದಾಗಿಯೇ ಭಯೋತ್ಪಾದನಾ ಚಟುವಟಿಕೆ ವ್ಯವಸ್ಥಿತವಾಗಿ ನಡೆಯುತ್ತಿದೆ. ರಾಮೇಶ್ವರಂ ಕೆಫೆ ಬದಲಾಗಿ ಬಿಜೆಪಿ ಕಚೇರಿಯಲ್ಲಿ ಬಾಂಬ್‌ ಸ್ಫೋಟಿಸಬೇಕೆಂದು ಯೋಜನೆ ರೂಪಿಸಲಾಗಿತ್ತು. ಈ ಪ್ರಕರಣದಲ್ಲಿ ಹಿಂದೂಗಳ ಮೇಲೆ ದಾಳಿ ನಡೆಸಲು ಪ್ಲಾನ್‌ ಮಾಡಲಾಗಿತ್ತು ಎಂದರು.

ಕಾಂಗ್ರೆಸ್‌ ನಾಯಕರಿಗೆ ಹೆಚ್ಚು ವಿಶ್ವಾಸ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರದಲ್ಲಿ ಬಿಜೆಪಿಗಿಂತಲೂ ಕಾಂಗ್ರೆಸ್‌ ನಾಯಕರಿಗೆ ಹೆಚ್ಚಿನ ವಿಶ್ವಾಸವಿದೆ. ಅದಕ್ಕಾಗಿ ಸಿಎಂ ಕುರ್ಚಿಗೆ ಸ್ಪರ್ಧೆ ಹೆಚ್ಚಿದ್ದು, ಎಲ್ಲರೂ ಮುಖ್ಯಮಂತ್ರಿಯಾಗುತ್ತೇನೆಂದು ಹೇಳುತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ದೂರಿದರು.

ಗೂಡ್ಸ್ ಗಾಡಿ, ಟ್ಯಾಕ್ಸಿ, ಆಟೋ ರಿಕ್ಷಾ ಖರೀದಿಗೆ ಸರ್ಕಾರದಿಂದ ಸಿಗಲಿದೆ 3 ಲಕ್ಷ ಸಬ್ಸಿಡಿ : ಅರ್ಜಿ ಸಲ್ಲಿಸಲು ಸೆ. 15 ಲಾಸ್ಟ್ ಡೇಟ್!

BIG UPDATE : ಯಜಮಾನಿಯರಿಗೆ ಗುಡ್ ನ್ಯೂಸ್ : ಕೊನೆಗೂ 1 ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ!

Share. Facebook Twitter LinkedIn WhatsApp Email

Related Posts

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid

07/04/2026 9:38 AM2 Mins Read

ಮಹಿಳೆಯರೇ ಗಮನಿಸಿ : ನಿಮ್ಮ ಸುರಕ್ಷತೆಗಾಗಿ ಬ್ಯಾಗ್ ನಲ್ಲಿ ಇಟ್ಟುಕೊಳ್ಳಲೇಬೇಕು ಈ 5 ಅಗತ್ಯ ವಸ್ತುಗಳು.!

07/04/2026 9:30 AM2 Mins Read

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ಬಳ್ಳಾರಿ ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid

07/04/2026 9:30 AM2 Mins Read
Recent News

ಇಂಡೋನೇಷ್ಯಾ ವಿಮಾನ ನಿಲ್ದಾಣದಲ್ಲಿ ಭಾರೀ ಅವಾಂತರ: ಸೋಕರ್ನೋ-ಹಟ್ಟಾ ಟರ್ಮಿನಲ್ 3ರ ಚಾವಣಿ ಕುಸಿತ; ಜೀವ ಉಳಿಸಿಕೊಳ್ಳಲು ಪ್ರಯಾಣಿಕರ ಪರದಾಟ!

07/04/2026 9:43 AM

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid

07/04/2026 9:38 AM

ಮಹಿಳೆಯರೇ ಗಮನಿಸಿ : ನಿಮ್ಮ ಸುರಕ್ಷತೆಗಾಗಿ ಬ್ಯಾಗ್ ನಲ್ಲಿ ಇಟ್ಟುಕೊಳ್ಳಲೇಬೇಕು ಈ 5 ಅಗತ್ಯ ವಸ್ತುಗಳು.!

07/04/2026 9:30 AM

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ಬಳ್ಳಾರಿ ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid

07/04/2026 9:30 AM
State News
KARNATAKA

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid

By kannadanewsnow5707/04/2026 9:38 AM KARNATAKA 2 Mins Read

ಬೆಂಗಳೂರು : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಭ್ರಷ್ಟಾಚಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಶಿವಮೊಗ್ಗ, ಬಳ್ಳಾರಿ ಮತ್ತು…

ಮಹಿಳೆಯರೇ ಗಮನಿಸಿ : ನಿಮ್ಮ ಸುರಕ್ಷತೆಗಾಗಿ ಬ್ಯಾಗ್ ನಲ್ಲಿ ಇಟ್ಟುಕೊಳ್ಳಲೇಬೇಕು ಈ 5 ಅಗತ್ಯ ವಸ್ತುಗಳು.!

07/04/2026 9:30 AM

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ಬಳ್ಳಾರಿ ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid

07/04/2026 9:30 AM

Astro Tips : ಸಾಲದ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದೀರಾ? ಈ ಸಣ್ಣ ಬದಲಾವಣೆಗಳು ನಿಮ್ಮ ಕಷ್ಟಗಳನ್ನು ದೂರ ಮಾಡಬಲ್ಲವು!

07/04/2026 9:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.