Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸರ ಪೋಸ್ಟ್ ಕಳವಳಕಾರಿ : ಸುಪ್ರೀಂಕೋರ್ಟ್

22/03/2026 6:52 AM

ಇಸ್ರೇಲ್‌ನ ಕಿಂಡರ್‌ಗಾರ್ಟನ್ ಮೇಲೆ ಇರಾನ್ ಕ್ಷಿಪಣಿ ದಾಳಿ: ಸ್ಫೋಟಕಗಳ ಸುರಿಮಳೆಗೈದ ‘ಕ್ಲಸ್ಟರ್ ಬಾಂಬ್’

22/03/2026 6:46 AM

ಸಾಗರ ಮಾರ್ಗಗಳ ಸುರಕ್ಷತೆಗೆ ಮೋದಿ ಕರೆ: ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮಾತುಕತೆ

22/03/2026 6:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಸ್‌ ಟಿಕೆಟ್‌ ದರ ಏರಿಕೆ ಖಂಡಿಸಿ ಆರ್‌.ಅಶೋಕ್ ಪ್ರತಿಭಟನೆ: ಸಿಎಂ ಪರ ಪ್ರಯಾಣಿಕರಿಗೆ ಕ್ಷಮೆ ಯಾಚನೆ
KARNATAKA

ಬಸ್‌ ಟಿಕೆಟ್‌ ದರ ಏರಿಕೆ ಖಂಡಿಸಿ ಆರ್‌.ಅಶೋಕ್ ಪ್ರತಿಭಟನೆ: ಸಿಎಂ ಪರ ಪ್ರಯಾಣಿಕರಿಗೆ ಕ್ಷಮೆ ಯಾಚನೆ

By kannadanewsnow0903/01/2025 5:20 PM

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮಾಡಿರುವ ಬಸ್‌ ಟಿಕೆಟ್‌ ದರ ಏರಿಕೆಯನ್ನು ಖಂಡಿಸಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಮೆಜೆಸ್ಟಿಕ್‌ನಲ್ಲಿ ವಿಭಿನ್ನವಾಗಿ ಪ್ರತಿಭಟಿಸಿದರು. ಬಸ್‌ ಪ್ರಯಾಣಿಕರ ಕೈಗೆ ಹೂ ನೀಡಿದ ಅವರು, ಸಿಎಂ ಸಿದ್ದರಾಮಯ್ಯನವರ ಪರವಾಗಿ ಕ್ಷಮೆ ಯಾಚಿಸಿದರು.

ಬಸ್‌ನಲ್ಲಿ ಕುಳಿತಿದ್ದ ಪ್ರಯಾಣಿಕರ ಬಳಿ ಹೋದ ಆರ್‌.ಅಶೋಕ ಹಾಗೂ ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, “ಕಾಂಗ್ರೆಸ್‌ ಸರ್ಕಾರ ಬೆಲೆ ಏರಿಕೆ ಮಾಡುವುದಿಲ್ಲವೆಂದು ನೀವು ಮತ ನೀಡಿದ್ದೀರಿ. ಆದರೆ ಮಾತಿಗೆ ತಪ್ಪಿದ ಸರ್ಕಾರ ಹೊಸ ವರ್ಷದಂದೇ ಟಿಕೆಟ್‌ ದರ ಏರಿಕೆ ಮಾಡಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯನವರ ಪರವಾಗಿ ನಾನು ಕ್ಷಮೆ ಕೇಳುತ್ತಿದ್ದೇನೆ” ಎಂದು ಪ್ರಯಾಣಿಕರಿಗೆ ಹೇಳಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮ್ಮ ಕಾಲಿಗೆ ಬೀಳುತ್ತೇವೆ, ಕೈ ಮುಗಿಯುತ್ತೇವೆ ಕ್ಷಮಿಸಿ ಬಿಡಿ ಎಂಬುದು ಸಿಎಂ ಸಿದ್ದರಾಮಯ್ಯನವರ ಹೊಸ ಸ್ಲೋಗನ್. ಟಿಕೆಟ್ ದರ 200-300 ರೂಪಾಯಿ ಜಾಸ್ತಿಯಾಗಿದೆ. ಬಸ್‌ಗಳ ಟಿಕೆಟ್ ದರ ಮಾತ್ರ ಅಲ್ಲ, ಮುಂದೆ ಹಾಲಿನ ದರವನ್ನೂ ಏರಿಕೆ ಮಾಡುತ್ತೇವೆ. ನೀರಿನ ದರವನ್ನು ಏರಿಕೆ ಮಾಡುತ್ತೇವೆ, ಎಲ್ಲಾ ವಸ್ತುಗಳ ಬೆಲೆಯನ್ನು ಗಗನಕ್ಕೆ ಮುಟ್ಟಿಸುವ ಶಪಥವನ್ನು ಮಾಡಿದ್ದೇನೆ ಎಂದು ಸಿದ್ದರಾಮಯ್ಯ ಪರವಾಗಿ ನಾನು ಹೇಳಿದ್ದೇನೆ. ಈಗ ಪ್ರಯಾಣಿಕರು ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ. ಪತ್ನಿಗೆ ಉಚಿತ ಟಿಕೆಟ್ ನೀಡಿ ಪತಿಗೆ ಡಬಲ್ ಚಾರ್ಜ್ ಮಾಡಿದರೆ ನಮ್ಮ ಮನೆ ದುಡ್ಡೇ ಖರ್ಚಾಗೋದು ಅಲ್ವಾ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ. 2025 ರಲ್ಲಿ ಎಲ್ಲ ತೆರಿಗೆ ಜಾಸ್ತಿ ಮಾಡುತ್ತೇವೆ. ನಿಮ್ಮ ಕಾಲಿಗೆ ಬೀಳುತ್ತೇವೆ. ಕೈ ಮುಗಿಯುತ್ತೇವೆ ಕ್ಷಮಿಸಿ ಬಿಡಿ ಎಂಬುದು ಸಿಎಂ ಸಿದ್ದರಾಮಯ್ಯ ಅವರ ಹೊಸ ಸ್ಲೋಗನ್ ಎಂದು ಲೇವಡಿ ಮಾಡಿದರು.

ಹಿಂದಿನ ಬಿಜೆಪಿ ಸರ್ಕಾರ ಯಾವುದನ್ನೂ ಉಚಿತವಾಗಿ ಕೊಟ್ಟಿರಲಿಲ್ಲ. ಆದರೆ ಈ ಸರ್ಕಾರ ಚುನಾವಣೆಗೂ ಮುನ್ನ ಉಚಿತವಾಗಿ ಕೊಡುತ್ತೇವೆಂದು ಹೇಳಿ ನಂತರ ಪೆಟ್ರೋಲ್, ಡಿಸೇಲ್ ದರ ಏರಿಸಿದೆ. ಮಕ್ಕಳು ಕುಡಿಯುವ ಹಾಲಿಗೂ ಕಲ್ಲು ಹಾಕಿದ್ದಾರೆ. ಮದ್ಯದ ದರ 50 ರೂಪಾಯಿ ಏರಿಕೆ ಮಾಡಿದ್ದಾರೆ. ಸ್ಟ್ಯಾಂಪ್ ಕಾಗದ ದರ, ಮನೆ ತೆರಿಗೆ, ವಿದ್ಯುತ್ ದರ ಏರಿಸಿದ್ದಾರೆ. ಮಾಧ್ಯಮದವರು ಕೂಗಾಡಿದರೂ ನಾನು ನೀರಿನ ತೆರಿಗೆ ಜಾಸ್ತಿ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ಎಂದು ದೂರಿದರು.

ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಹೊಸ ವರ್ಷಕ್ಕೆ ಗಿಫ್ಟ್ ಕೊಟ್ಟಿದ್ದಾರೆ. ಹಾಗೆಯೇ ಸಿಎಂ ಸಿದ್ದರಾಮಯ್ಯ ಕೂಡ ಕರ್ನಾಟಕದ ಜನತೆಗೆ ಬಸ್ ದರ ಏರಿಕೆಯ ಗಿಫ್ಟ್‌ ನೀಡಿದ್ದಾರೆ. ಇಂತಹ ಸಾರಿಗೆ ಸಚಿವರನ್ನು ನಾವು ನೋಡಲು ಸಾಧ್ಯವೇ ಇಲ್ಲ. ಹತ್ತು ವರ್ಷಗಳಿಂದ ಟಿಎ, ಡಿಎಂ ಜಾಸ್ತಿಯಾಗಿಲ್ಲವೇ? ಪೆಟ್ರೋಲ್, ಡೀಸೆಲ್ ದರ ಏರಿಕೆ ಆಗಿಲ್ಲವೇ? ಹಾಗಾದರೆ ಹಿಂದಿನ ಬಿಜೆಪಿ ಸರ್ಕಾರ ಯಾಕೆ ದರ ಏರಿಕೆ ಮಾಡಿಲ್ಲ? 2013 ರಲ್ಲಿ ನಾನು ಸಾರಿಗೆ ಸಚಿವನಾಗಿದ್ದೆ. ನಾನು ಬಿಎಂಟಿಸಿ ಹಾಗೂ ಕೆಎಸ್ಆರ್‌ಟಿಸಿಗೆ 1 ಸಾವಿರ ಕೋಟಿ ರೂ.ಗೂ ಹೆಚ್ಚು ಲಾಭ ತಂದುಕೊಟ್ಟಿದ್ದೆ. ಕೋವಿಡ್‌ ಸಮಯದಲ್ಲಿ ಬಸ್‌ ಸಂಚಾರ ಇರಲಿಲ್ಲವಾದ್ದರಿಂದ ನಷ್ಟವಾಗಿತ್ತು. ಆದರೆ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ನೌಕರರ ಸಂಬಳ ಹೆಚ್ಚ ಮಾಡಲೇಬೇಕು. ನಾನು ಇದ್ದಾಗಲೂ ಸಂಬಳ ಹೆಚ್ಚು ಮಾಡಿಸಿದ್ದೆ. ಆದರೆ ಈಗಿನ ಸರ್ಕಾರ ಸಾಲ ಮಾಡಿ ಆ ಹೊರೆಯನ್ನು ಜನರ ಮೇಲೆ ಹೇರುವುದು ಎಷ್ಟು ಸರಿ? ಎಂದು ಪ್ರಶ್ನೆ ಮಾಡಿದರು.

BIG NEWS: ಬೆಂಗಳೂರು ಜನತೆಗೆ ಮತ್ತೊಂದು ಶಾಕ್: ಶೀಘ್ರವೇ ನೀರಿನ ದರ ಪರಿಷ್ಕರಣೆ, ಜಲಮಂಡಳಿ ಸುಳಿವು

BIG NEWS: ಸಾಗರದ ‘ಉಳ್ಳೂರು ವ್ಯಾಪ್ತಿ’ಯಲ್ಲಿ ‘ಸಾಗುವಾನಿ ಮರ’ಗಳ ಕಳ್ಳಸಾಗಾಟ: ಕಣ್ಮುಚ್ಚಿ ಕುಳಿತ ‘ಅರಣ್ಯ ಇಲಾಖೆ’

BREAKING : ರಾಮನಗರದಲ್ಲಿ ಭೀಕರ ಕೊಲೆ : ‘ನ್ಯೂ ಇಯರ್’ ಪಾರ್ಟಿ ವೇಳೆ ವ್ಯಕ್ತಿಯನ್ನು ಕೊಂದು ಬಾವಿಗೆ ಎಸೆದ ದುರುಳರು!

Share. Facebook Twitter LinkedIn WhatsApp Email

Related Posts

BREAKING NEWS

BREAKING : ರಾಜ್ಯದಲ್ಲಿ ಜವರಾಯನ ಅಟ್ಟಹಾಸ : ಬೆಂಗಳೂರಲ್ಲಿ ಪ್ರತ್ಯೇಕ ಅಪಘಾತದಲ್ಲಿ 6 ಜನ ಸ್ಥಳದಲ್ಲೇ ದುರ್ಮರಣ!

22/03/2026 6:17 AM1 Min Read

BIG NEWS: 2027ರ ಜನಗಣತಿ ಕಾರ್ಯಕ್ಕೆ ಎಲ್ಲಾ ಶಿಕ್ಷಕರನ್ನು ಅಗತ್ಯಕ್ಕನುಗುಣವಾಗಿ ನಿಯೋಜಿಸಿ: ರಾಜ್ಯ ಸರ್ಕಾರ ಆದೇಶ

22/03/2026 6:16 AM1 Min Read

ಏನಿದು ‘ಡಿಜಿಟಲ್ ಅರೆಸ್ಟ್’? ನಿಮ್ಮ ಹಣವನ್ನು ‘ಸೈಬರ್ ವಂಚಕರ ಜಾಲ’ದಿಂದ ರಕ್ಷಿಸಿಕೊಳ್ಳಲು ಇಲ್ಲಿದೆ ಟಿಪ್ಸ್

22/03/2026 6:10 AM2 Mins Read
Recent News

BIG NEWS : ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸರ ಪೋಸ್ಟ್ ಕಳವಳಕಾರಿ : ಸುಪ್ರೀಂಕೋರ್ಟ್

22/03/2026 6:52 AM

ಇಸ್ರೇಲ್‌ನ ಕಿಂಡರ್‌ಗಾರ್ಟನ್ ಮೇಲೆ ಇರಾನ್ ಕ್ಷಿಪಣಿ ದಾಳಿ: ಸ್ಫೋಟಕಗಳ ಸುರಿಮಳೆಗೈದ ‘ಕ್ಲಸ್ಟರ್ ಬಾಂಬ್’

22/03/2026 6:46 AM

ಸಾಗರ ಮಾರ್ಗಗಳ ಸುರಕ್ಷತೆಗೆ ಮೋದಿ ಕರೆ: ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮಾತುಕತೆ

22/03/2026 6:41 AM
BREAKING NEWS

BREAKING : ರಾಜ್ಯದಲ್ಲಿ ಜವರಾಯನ ಅಟ್ಟಹಾಸ : ಬೆಂಗಳೂರಲ್ಲಿ ಪ್ರತ್ಯೇಕ ಅಪಘಾತದಲ್ಲಿ 6 ಜನ ಸ್ಥಳದಲ್ಲೇ ದುರ್ಮರಣ!

22/03/2026 6:17 AM
State News
BREAKING NEWS KARNATAKA

BREAKING : ರಾಜ್ಯದಲ್ಲಿ ಜವರಾಯನ ಅಟ್ಟಹಾಸ : ಬೆಂಗಳೂರಲ್ಲಿ ಪ್ರತ್ಯೇಕ ಅಪಘಾತದಲ್ಲಿ 6 ಜನ ಸ್ಥಳದಲ್ಲೇ ದುರ್ಮರಣ!

By kannadanewsnow0522/03/2026 6:17 AM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ವರಾಯ ಅಟ್ಟಹಾಸ ಮೆರೆದಿದ್ದು, ಪ್ರತ್ಯೇಕ ಅಪಘಾತದಲ್ಲಿ 6 ಜನ ಸಾವನಪ್ಪಿದ್ದಾರೆ. ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು…

BIG NEWS: 2027ರ ಜನಗಣತಿ ಕಾರ್ಯಕ್ಕೆ ಎಲ್ಲಾ ಶಿಕ್ಷಕರನ್ನು ಅಗತ್ಯಕ್ಕನುಗುಣವಾಗಿ ನಿಯೋಜಿಸಿ: ರಾಜ್ಯ ಸರ್ಕಾರ ಆದೇಶ

22/03/2026 6:16 AM

ಏನಿದು ‘ಡಿಜಿಟಲ್ ಅರೆಸ್ಟ್’? ನಿಮ್ಮ ಹಣವನ್ನು ‘ಸೈಬರ್ ವಂಚಕರ ಜಾಲ’ದಿಂದ ರಕ್ಷಿಸಿಕೊಳ್ಳಲು ಇಲ್ಲಿದೆ ಟಿಪ್ಸ್

22/03/2026 6:10 AM

GOOD NEWS : ಬೆಂಗಳೂರು ಜನತೆಗೆ ಗುಡ್ ನ್ಯೂಸ್ : ಮೇನಲ್ಲಿ ನಮ್ಮ ಮೆಟ್ರೋ ಗುಲಾಬಿ ಮಾರ್ಗ ಆರಂಭ!

22/03/2026 6:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.