ಬೆಂಗಳೂರು : ರಾಜ್ಯ ಶಿಕ್ಷಣ ಇಲಾಖೆಯಿಂದ ಮತ್ತೊಂದು ಎಡಪಟ್ಟು ಆಗಿದ್ದು ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಗಳಿಗೆ ಉತ್ತರ ಪತ್ರಿಕೆಗಳನ್ನು ವಿದ್ಯಾರ್ಥಿಗಳೇ ತೆಗೆದುಕೊಂಡು ಹೋಗಬೇಕು ಎಂಬುವುದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಕಿಡಿ ಕಾರಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳಿಗೂ ಉತ್ತರ ಪತ್ರಿಕೆಗಳನ್ನು ನೀಡದೇ ಇರುವಷ್ಟು ಬರಗೆಟ್ಟು ಹೋಗಿದೆ ಎಂದು ಕಿಡಿ ಕಾರಿದ್ದಾರೆ.
55 ಲಕ್ಷ ಸರ್ಕಾರಿ ಶಾಲಾಮಕ್ಕಳಿಗೆ ‘ರಾಗಿ ಮಾಲ್ಟ್’ ವಿತರಣೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ!
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪೂರ್ವಸಿದ್ಧತಾ ಪರೀಕ್ಷೆಗೆ ಉತ್ತರ ಪತ್ರಿಕೆಗಳನ್ನೂ ಕೂಡ ಸರಬರಾಜು ಮಾಡಲಾಗದಷ್ಟು ಬರಗೆಟ್ಟು ಹೋಗಿದೆ ಈ ದರಿದ್ರ ರಾಜ್ಯ ಕಾಂಗ್ರೆಸ್ ಸರ್ಕಾರ ಎಂದಿದ್ದಾರೆ.ಉತ್ತರ ಪತ್ರಿಕೆಗಳನ್ನ ಕೊಡಲಾಗದ ಮೇಲೆ ವಿದ್ಯಾರ್ಥಿಗಳಿಂದ 50 ರೂಪಾಯಿ ಪರೀಕ್ಷಾ ಶುಲ್ಕವನ್ನ ವಸೂಲಿ ಮಾಡಿದ್ದು ಯಾವ ಪುರುಷಾರ್ಥಕ್ಕಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೇ? ಎಂದು ಪ್ರಶ್ನಿಸಿದ್ದಾರೆ.
BREAKING : ಹೆಣ್ಣು ಮಕ್ಕಳ ಕುರಿತು ಅವಹೇಳನ ಹೇಳಿಕೆ ಆರೋಪ : ನಟ ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲು
ಸಿಎಂ ಸಿದ್ದರಾಮಯ್ಯ ಅವರೇ, ನಿಮ್ಮ ಶಿಕ್ಷಣ ಸಚಿವರಿಗೆ ಇಲಾಖೆ ನಡೆಸಲು ಕೈಲಾಗದಿದ್ದರೆ, ಅವರಿಂದ ರಾಜೀನಾಮೆ ಪಡೆದುಕೊಂಡು ಯಾರಾದರೂ ಸಮರ್ಥರಿಗೆ ಶಿಕ್ಷಣ ಇಲಾಖೆ ನೀಡಿ. ಅದು ಬಿಟ್ಟು ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡಬೇಡಿ ಎಂದು ಆಕ್ರೋಶ ಹೊರಹಕಿದ್ದಾರೆ.
BREAKING : ಮಾರ್ಚ್ 17ರ ನಂತರ ಚುನಾವಣಾ ‘ರಾಜಕೀಯ ನಿವೃತ್ತಿ’ : ಸಂಸದ ಶ್ರೀನಿವಾಸ್ ಪ್ರಸಾದ್