ಬೆಂಗಳೂರು: ಬರ ಮತ್ತು ಸಾಲಬಾಧೆಯಿಂದ ಕಂಗೆಟ್ಟಿರುವ ಉತ್ತರ ಕರ್ನಾಟಕದ ರೈತರಿಗೆ ತಮ್ಮ ಜೀವ ಉಳಿಸಿಕೊಳ್ಳಲು ಈಗ ಊರು ಬಿಡುವುದೊಂದೇ ದಾರಿ ಎಂಬ ಶೋಚನೀಯ ಪರಿಸ್ಥಿತಿ ತಂದಿಟ್ಟಿದೆ ಕಾಂಗ್ರೆಸ್ ಸರ್ಕಾರ. ಕೃಷಿ ಕಾರ್ಮಿಕರಿಗೆ ಗುಳೆ ಗ್ಯಾರೆಂಟಿ ಎಂಬುದಾಗಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ.
ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, ಸದಾ ಬಣ ರಾಜಕೀಯದಲ್ಲಿ ನಿರತವಾಗಿರುವ ಕಾಂಗ್ರೆಸ್ ಮಂತ್ರಿಗಳು ಹಾಗೂ ಶಾಸಕರು, ಎಷ್ಟು ಜನ ಡಿಸಿಎಂಗಳಿರಬೇಕು ಎಂದು ಲೆಕ್ಕಾಚಾರ ಹಾಕುವ ಬದಲು ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಏನು ಮಾಡಬೇಕು ಎಂದು ಯೋಚಿಸಿದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಪಂಚ ರಾಜ್ಯಗಳ ಚುನಾವಣೆಗೆ ಕಲೆಕ್ಷನ್ ಮಾಡುವಲ್ಲಿರುವ ಆಸಕ್ತಿಯಲ್ಲಿ, ತೆಲಂಗಾಣ ಚುನಾವಣೆಗೆ ಪ್ರಚಾರ ಮಾಡುವಲ್ಲಿರುವ ಉತ್ಸಾಹದಲ್ಲಿ ಕೊಂಚವಾದರೂ ರಾಜ್ಯದ ರೈತರ ಬಗ್ಗೆ ಇದ್ದಿದ್ದರೆ, ಕೃಷಿ ಕಾರ್ಮಿಕರು ಇಂದು ಮನೆ ಮಠ ಬಿಟ್ಟು ಗುಳೆ ಹೋಗುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದಿದ್ದಾರೆ.
ಸಿಎಂ ಸಿದ್ಧರಾಮಯ್ಯ ಅವರೇ, ನಿಮ್ಮಲ್ಲಿ ನಿಜಕ್ಕೂ ಮಾನವೀಯತೆ ಇದ್ದರೆ, ರಾಜ್ಯದ ಕೃಷಿ ಕಾರ್ಮಿಕರು, ದಲಿತರು, ಪರಿಶಿಷ್ಟ ಪಂಗಡದವರು, ಹಿಂದುಳಿದವರ ಮೇಲೆ ಕಾಳಜಿ ಇದ್ದರೆ ಮೊದಲು ರಾಜ್ಯದ ಜನತೆ ಗುಳೆ ಹೋಗುವುದನ್ನು ತಪ್ಪಿಸಿ. ಎಲ್ಲದಕ್ಕೂ ಕೇಂದ್ರದತ್ತ ಬೊಟ್ಟು ಮಾಡಿ ತೋರಿಸುವುದೇ ನಿಮ್ಮ ಸಾಧನೆಯಾಗಿಬಿಟ್ಟಿದೆ. ರೈತರ ನೆರವಿಗೆ ಬರಲು ನಿಮ್ಮ ಕೈಲಾಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಗುಡುಗಿದ್ದಾರೆ.
ಕೃಷಿ ಕಾರ್ಮಿಕರಿಗೆ ಗುಳೆ ಗ್ಯಾರೆಂಟಿ
ಬರ ಮತ್ತು ಸಾಲಬಾಧೆಯಿಂದ ಕಂಗೆಟ್ಟಿರುವ ಉತ್ತರ ಕರ್ನಾಟಕದ ರೈತರಿಗೆ ತಮ್ಮ ಜೀವ ಉಳಿಸಿಕೊಳ್ಳಲು ಈಗ ಊರು ಬಿಡುವುದೊಂದೇ ದಾರಿ ಎಂಬ ಶೋಚನೀಯ ಪರಿಸ್ಥಿತಿ ತಂದಿಟ್ಟಿದೆ ಕಾಂಗ್ರೆಸ್ ಸರ್ಕಾರ.
ಸದಾ ಬಣ ರಾಜಕೀಯದಲ್ಲಿ ನಿರತವಾಗಿರುವ ಕಾಂಗ್ರೆಸ್ ಮಂತ್ರಿಗಳು ಹಾಗೂ ಶಾಸಕರು, ಎಷ್ಟು ಜನ ಡಿಸಿಎಂಗಳಿರಬೇಕು ಎಂದು… pic.twitter.com/V5kn47z3Sy
— R. Ashoka (ಆರ್. ಅಶೋಕ) (@RAshokaBJP) January 7, 2024
ಬೆಂಗಳೂರಲ್ಲಿ ‘ರೇಷ್ಮೆ ಭವನ’ ನಿರ್ಮಾಣಕ್ಕೆ ಹೂಡಿಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
BREAKING: ‘ಪಶ್ಚಿಮ ಬಂಗಾಳ’ದಲ್ಲಿ ಹಾಡಹಗಲೇ ‘TMC ನಾಯಕ’ನನ್ನು ಗುಂಡಿಕ್ಕಿ ಹತ್ಯೆ