ಬೆಂಗಳೂರು: ನಗರದ ಆನೇಕಲ್ ನಲ್ಲಿ ಮಹಿಳೆಯೊಬ್ಬರು ಸ್ಕ್ಯಾನಿಂಗ್ ಗೆ ತೆರಳಿದ್ದಂತ ಸಂದರ್ಭದಲ್ಲಿ ಸ್ಕ್ಯಾನಿಂಗ್ ಮಾಡುವ ನೆಪದಲ್ಲಿ ರೇಡಿಯಾಲಜಿಸ್ಟ್ ಜಯಕುಮಾರ್ ಖಾಸಗಿ ಅಂಗಾಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದರು. ಈ ವೀಡಿಯೋ ವೈರಲ್ ಕೂಡ ಆಗಿತ್ತು. ಮಹಿಳೆ ನಾಲ್ಕೈದು ದಿನಗಳ ಹಿಂದೆಯೇ ದೂರು ನೀಡಿದ್ದರೂ ಬಂಧಿಸಿರಲಿಲ್ಲ. ಆದರೇ ಠಾಣೆಯ ಮುಂದೆ ಸಾರ್ವಜನಿಕರು ಪ್ರತಿಭಟನೆ ನಡೆಸಿ ಬಂಧನಕ್ಕೆ ಒತ್ತಾಯಿಸಿದ್ದರು. ಹೀಗಾಗಿ ಕೊನೆಗೂ ಸ್ಕ್ಯಾನಿಂಗ್ ವೇಳೆ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದಂತ ರೇಡಿಯಾಲಜಿಸ್ಟ್ ಜಯಕುಮಾರ್ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಸಮೀಪದ ಆನೇಕಲ್ ಪಟ್ಟಣದಲ್ಲಿ ಸ್ಕ್ಯಾನಿಂಗ್ ಸೆಂಟರ್ ವೊಂದರಲ್ಲಿ ರೆಡಿಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದಂತ ಜಯಕುಮಾರ್ ಎಂಬುವರೇ ಹೀಗೆ ಲೈಂಗಿಕ ಕಿರುಕುಳ ನೀಡಿದಂತ ಆರೋಪಿಯಾಗಿದ್ದಾರೆ. ಅವರ ವಿರುದ್ಧ ಮಹಿಳೆಯೊಬ್ಬರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಕೆಲ ದಿನಗಳ ಹಿಂದೆ ಸ್ಕ್ಯಾನಿಂಗ್ ಮಾಡಿಸೋದಕ್ಕೆ ಮಹಿಳೆಯೊಬ್ಬರು ತೆರಳಿದ್ದರು. ಈ ವೇಳೆಯಲ್ಲಿ ಸ್ಕ್ಯಾನಿಂಗ್ ಮಾಡುವ ನೆಪದಲ್ಲಿ ಮಹಿಳೆಯ ಖಾಸಗಿ ಅಂಗಾಂಗವನ್ನು ರೆಡಿಯಾಲಜಿಸ್ಟ್ ಜಯಕುಮಾರ್ ಮುಟ್ಟಿದ್ದರು.. ಇದಕ್ಕೆ ಮಹಿಳೆ ವಿರೋಧ ವ್ಯಕ್ತ ಪಡಿಸಿದಾಗ ಹೊರಗೆ ಹೇಳಿದಂತೆ ಧಮ್ಕಿ ಹಾಕಿದ್ದಾರೆ. ಅಲ್ಲದೇ ಅವಾಚ್ಯ ಶಬ್ದಗಳಿಂದಲೂ ನಿಂದಿಸಿದ್ದರು.
ಈ ಎಲ್ಲವನ್ನು ಮೊಬೈಲ್ ನಲ್ಲಿ ಚಿತ್ರಿಸಿಕೊಂಡು, ಆನೇಕಲ್ ಠಾಣೆಗೆ ತೆರಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಎಫ್ಐಆರ್ ದಾಖಲಿಸಿಕೊಂಡಿರುವಂತ ಪೊಲೀಸರು ಆರೋಪಿ ಜಯಕುಮಾರ್ ಠಾಣೆಗೆ ಕರಿಸಿಕೊಂಡು ಬಿಟ್ಟು ಕಳುಹಿಸಿದ್ದ ಆರೋಪ ಕೇಳಿ ಬಂದಿತ್ತು. ಲೈಂಗಿಕ ಕಿರುಕುಳ ನೀಡಿದಂತ ರೆಜಿಯಾಲಜಿಸ್ಟ್ ಬಂಧಿಸಿಲ್ಲ ಎಂಬುದಾಗಿ ಮಹಿಳೆ ಆರೋಪಿಸಿದ್ದರು.
ಇದಲ್ಲದೇ ರೇಡಿಯಾಲಜಿಸ್ಟ್ ಜಯಕುಮಾರ್ ಬಂಧನಕ್ಕೆ ಆಗ್ರಹಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನಲೆಯಲ್ಲಿ ಕೊನೆಗೂ ಆನೇಕಲ್ ಪೊಲೀಸರು ಲೈಂಗಿಕ ಕಿರುಕುಳ ನೀಡಿದಂತ ರೇಡಿಯಾಲಜಿಸ್ಟ್ ಜಯಕುಮಾರ್ ಬಂಧಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
BREAKING : ರಾಜ್ಯ ಸಚಿವ ಸಂಪುಟ ಪುನಾರಚನೆ ಸದ್ಯಕ್ಕಿಲ್ಲ : CM ಸಿದ್ದರಾಮಯ್ಯ ಸ್ಪಷ್ಟನೆ








