ವಿಜಯಪುರ : ಜಿಲ್ಲೆಯಲ ಆಲ್ ಅಮೀನ್ ಮೆಡಿಕಲ್ ಕಾಲೇಜಿನಲ್ಲಿ ರ್ಯಾಗಿಂಗ್ ಘಟನೆ ನಡೆದಿದೆ ಎನ್ನಲಾಗಿತ್ತು. ವಿದ್ಯಾರ್ಥಿಗಳ ಮೇಲೆ ಹಲ್ಲೆ ಕೂಡ ಮಾಡಲಾಗಿ ಎಂಬುದಾಗಿ ವರದಿಯಾಗಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವಂತ ವಿಜಯಪುರ ಜಿಲ್ಲಾಧಿಕಾರಿಗಳು, ಹಲ್ಲೆ ಮಾಡಿದಂತ ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.
ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ವಿಜಯಪುರ ಜಿಲ್ಲಾಧಿಕಾರಿ, ತಿಕೋಟಾ ತಾಲೂಕಿನ ನವರಸಪುರ ಗ್ರಾಮದಲ್ಲಿರುವ ಅಲ್-ಅಮೀನ್ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಯೋರ್ವನ ಮೇಲೆ ಅದೇ ಕಾಲೇಜಿನ 04 ಜನ ಎಂಬಿಬಿಎಸ್ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮತ್ತು ದೈಹಿಕ ಹಿಂಸೆ ನೀಡಲಾಗಿದೆ ಎಂಬ ವರದಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ವಿಜಯಪುರ ಮತ್ತು ತಿಕೋಟಾ ತಹಶೀಲ್ದಾರ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು ಹಲ್ಲೆಗೊಳಗಾದ ವಿದ್ಯಾರ್ಥಿ ಹಮೀಮಗೆ ಭೇಟಿ ಮಾಡಿ, ಪರಿಶೀಲಿಸಿ, ಯೋಗಕ್ಷೇಮ ವಿಚಾರಣೆ ನಡೆಸಿದ್ದು, ವಿದ್ಯಾರ್ಥಿಗೆ ಯಾವುದೇ ಗಾಯಗಳಾಗಿರುವುದಿಲ್ಲ ಹಾಗೂ ವಿದ್ಯಾರ್ಥಿಯು ದೈಹಿಕವಾಗಿ ಆರೋಗ್ಯಕರವಾಗಿದ್ದಾನೆ ಎಂದು ವರದಿ ನೀಡಿದ್ದಾರೆ.
ಘಟನೆಯ ವಿವರವನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಮೊಹ್ಮದ ಮೊಹಸೀನ್ ಅವರಿಗೆ ಒದಗಿಸಿದ್ದು, ಈ ಕುರಿತು ಅವರು ಹಲ್ಲೆಗೊಳಗಾದ ವಿದ್ಯಾರ್ಥಿಗೆ ಸೂಕ್ತ ಸಹಾಯ ಹಾಗೂ ಹಲ್ಲೆ ಮಾಡಿರುವ 04 ಜನ ಹಿರಿಯ ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಅವರು ತಿಳಿಸಿದ್ದು, ಹಲ್ಲೆ ಮಾಡಿದ ವಿದ್ಯಾರ್ಥಿಗಳ ವಿರುದ್ದ ಸೂಕ್ತ ಕಾನೂನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಸಂಗಮ್ ನೀರು ಕುಡಿಯಲು ಯೋಗ್ಯ: ಮಲದ ಬ್ಯಾಕ್ಟೀರಿಯಾ ವರದಿ ತಿರಸ್ಕರಿಸಿದ ಯುಪಿ ಸಿಎಂ ಯೋಗಿ
BREAKING NEWS : ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ