ರಾಯಚೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ ಯಾತ್ರೆ’ ರಾಯಚೂರಿನಲ್ಲಿ ಸಂಚಲನ ಸೃಷ್ಟಿಸಿದೆ. ಬೃಹತ್ ಸಂಖ್ಯೆಯಲ್ಲಿ ಜನರು ರಾಹುಲ್ ಗಾಂಧಿ ಜೊತೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ.
ವಿಶೇಷವಾಗಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಜೋಡೋ ಯಾತ್ರೆಯಲ್ಲಿ ಶಾಸಕರ ಪತ್ನಿಯರು ಹೆಜ್ಜೆ ಹಾಕಿದ್ದರು. ರಾಯಚೂರು ಗ್ರಾಮಾಂತರ ಕ್ಷೇತ್ರದಲ್ಲಿ ರಾಹುಲ್ ಶಾಸಕರ ಪತ್ನಿಯರ ಜೊತೆ ಹೆಜ್ಜೆ ಹಾಕಿದರು.
ಯಾತ್ರೆಯಲ್ಲಿ ರಾಹುಲ್ ಗಾಂಧಿಗೆ ಮಾಜಿ ಸಚಿವ ಕೃಷ್ಣ ಭೈರೇಗೌಡ ಪತ್ನಿ ಮೀನಾಕ್ಷಿ, ಅಜಯ್ ಸಿಂಗ್ ಪತ್ನಿ ಶ್ವೇತಾ ಹಾಗೂ ಕೆಪಿಸಿಸಿ ಪದಾಧಿಕಾರಿ ರವಿ ಬೋಸರಾಜ್ ಪತ್ನಿ ಕೂಡ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಭಾಗಿಯಾದರು.