ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದು, ಗೆಲುವು ಸಾಧಿಸುವುದರೊಂದಿಗೆ ಅಧಿಕಾರಕ್ಕೆ ಬಂದ್ರೆ ರಾಷ್ಟ್ರದ ಜನತೆಗಾಗಿ 3 ಯೋಜನೆಯನ್ನು ಜಾರಿಗೊಳಿಸೋದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ.
ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿ ಮಾತನಾಡಿದಂತ ಅವರು ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದ್ರೆ ಮೂರು ಯೋಜನೆ ಜಾರಿಗೊಳಿಸಲಾಗುತ್ತದೆ ಎಂದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ ಜಾರಿಗೊಳಿಸಲಾಗುತ್ತದೆ. ರಾಷ್ಟ್ರಮಟ್ಟದಲ್ಲಿ ರೈತರ ಬೆಳೆಸಾಲ ಮನ್ನಾ ಮಾಡುತ್ತೇವೆ. 30 ದಿನಗಳಲ್ಲಿ ಬೆಳಎ ವಿಮೆ ಪಾವತಿ ಮಾಡಲು ಕ್ರಮ ಕೈಗೊಳ್ಳುತ್ತೇವೆ ಎಂದು ಘೋಷಿಸಿದರು.
ನಾವು ಅಧಿಕಾರಕ್ಕೆ ಬಂದರೇ ವರ್ಷಕ್ಕೆ ಮಹಿಳೆಯರಿಗೆ 1 ಲಕ್ಷ ಕೊಡುತ್ತೇವೆ. 24 ಸಾವಿರ ಸೇರಿಸಿ 1 ಲಕ್ಷದ 24 ಸಾವಿರ ರೂ ಕೊಡುತ್ತೇವೆ. ಬಡ ಮಹಿಳೆಯರಿಗೆ ವರ್ಷಕ್ಕೆ 1.24 ಲಕ್ಷ ಕೊಡುತ್ತೇವೆ ಎಂದರು.
ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಳ ಮಾಡುತ್ತೇವೆ. ಸರ್ಕಾರಿ, ಅರೆ ಸರ್ಕಾರಿ ನೌಕರರ ಗುತ್ತಿಗೆ ಪದ್ದತಿ ರದ್ದು ಪಡಿಸಲಾಗುತ್ತದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೆ ಉದ್ಯೋಗ ಭದ್ರತಾ ಯೋಜನೆ ಜಾರಿಗೊಳಿಸಲಾಗುದುವುದು ಎಂದು ಹೇಳಿದರು.