ಚಿತ್ರದುರ್ಗ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಇದೀಗ ಕೋಟೆನಾಡು ಚಿತ್ರದುರ್ಗದಲ್ಲಿದ್ದು,ಅಲ್ಲಿನ ಜನತೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.
ಹರ್ತಿಕೋಟೆ ಗ್ರಾಮದ ಬಳಿ ಜನರನ್ನುದ್ದೇಶಿಸಿ ಭಾಷಣ ಮಾಡಿದ ರಾಹುಲ್ ಗಾಂಧಿ ‘ ದೇಶದಲ್ಲಿ ರಾಜ್ಯ ಬಿಜೆಪಿ ಸರ್ಕಾರ ನಂ.1 ಭ್ರಷ್ಟ ಸರ್ಕಾರ, ಬೊಮ್ಮಾಯಿ ಸರ್ಕಾರ 40 ಪರ್ಸೆಂಟ್ ಕಮಿಷನ್ ಪಡೆಯುವ ಸರ್ಕಾರ, ಬಿಜೆಪಿ ಶಾಸಕರೇ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಹೇಳಿದ್ದಾರೆ ಎಂದು ಕಿಡಿಕಾರಿದರು.
ನಿರುದ್ಯೋಗ ಸಮಸ್ಯೆ ದೇಶವನ್ನು ಕಾಡುತ್ತಿದೆ. ಬೆಲೆ ಏರಿಕೆಯಿಂದ ಬಡ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.. ಗ್ಯಾಸ್ ಸಿಲಿಂಡರ್ ದುಬಾರಿ ಆಗಿದೆ, ಬಡ ತಾಯಂದಿರು ಈ ವಿಚಾರಕ್ಕೆ ಕಣ್ಣೀರಿಡುತ್ತಿದ್ದಾರೆ, ಕಾರ್ಮಿಕರ ಹಿತದೃಷ್ಟಿಯಿಂದ ಈ ಯಾತ್ರೆ ನಡೆಸುತ್ತಿದ್ದೇವೆ. ಎಂದರು.
ಬೆಲೆ ಏರಿಕೆ, ನಿರುದ್ಯೋಗದಿಂದ ಜನ ಬೇಸತ್ತಿದ್ದಾರೆ. ಕಳೆದ ಎರಡೂವರೆ ವರ್ಷದಿಂದ ಈ ಸರ್ಕಾರ ಯಾವ ಕ್ರಮ ಕೈಗೊಂಡಿಲ್ಲ. ಯಾತ್ರೆ ಉದ್ದಕ್ಕೂ ಎಲ್ಲರೂ ನಷ್ಟದಲ್ಲಿರುವ ಬಗ್ಗೆ ಹೇಳುತ್ತಿದ್ದಾರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯಾವ ಸಹಕಾರ ನೀಡುತ್ತಿಲ್ಲ ಎಂದು ಜನ ಹೇಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ವಾಗ್ಧಾಳಿ ನಡೆಸಿದ್ದಾರೆ.
BIGG NEWS : ಮುರುಘಾಶ್ರೀ ಪೋಕ್ಸೋ ಕೇಸ್ : 4 ಮತ್ತು 5 ನೇ ಆರೋಪಿ ಜಾಮೀನು ಅರ್ಜಿ ವಜಾ |Murugha Sri
ಮಣಿಪಾಲ್ ಆಸ್ಪತ್ರೆಗೆ ‘ಸಿಎಂ ಬೊಮ್ಮಾಯಿ’ ಭೇಟಿ : ಸಿಪಿಐ ಶ್ರೀಮಂತ್ ಇಲ್ಲಾಳ್ ಆರೋಗ್ಯ ವಿಚಾರಣೆ