ನವದೆಹಲಿ: ಕರ್ನಾಟಕ ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಬಿಹಾರ ವಿಧಾನಸಭಾ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್ ಸಚಿವ ಸಂಪುಟ ಪುನಾರಚನೆಗೊಳ್ಳಲಿದೆ ಎನ್ನುವುದು ಖಚಿತಗೊಂಡಂತೆ ಆಗಿದೆ.
ಹೌದು ರಾಜ್ಯ ಸಂಪುಟ ಪುನಾರಚನೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಖರ್ಗೆ ಜೊತೆಗೆ ಚರ್ಚಿಸಿ ಪುನಾರಚನೆ ಮಾಡಿ ಎಂಬುದಾಗಿ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹೇಳಿರುವುದಾಗಿ ತಿಳಿದು ಬಂದಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ ವೇಣುಗೋಪಾಲ್ ಜೊತೆಗೆ ಸಿಎಂ ಸಿದ್ಧರಾಮಯ್ಯ ಚರ್ಚಿಸಿ ಸಂಪುಟ ಪುನಾರಚನೆ ಮಾಡಲಿದ್ದಾರೆ. ಚರ್ಚೆ ಬಳಿಕ ಯಾರಿಗೆ ಸಚಿವ ಸ್ಥಾನ ನೀಡಬೇಕು. ಯಾರನ್ನು ತೆಗೆದು ಹಾಕಬೇಕು ಎನ್ನುವ ಅಂತಿಮ ಲೀಸ್ಟ್ ಕಾಂಗ್ರೆಸ್ ಹೈಕಮಾಂಡ್ ಗೆ ಸಿಎಂ ಸಿದ್ಧರಾಮಯ್ಯ ಸಲ್ಲಿಸೋ ಸಾಧ್ಯತೆ ಇದೆ.
ರಾಜ್ಯ ಸಂಪುಟದ ಹಾಲಿ 8 ರಿಂದ 12 ಸಚಿವರನ್ನು ಬದಲಾವಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಯಾರು ಔಟ್, ಯಾರು ಇನ್ ಆಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
ನ.18ರಂದು ಸಾಗರದ ತಾಳಗುಪ್ಪದಲ್ಲಿ ಸಚಿವ ಮಧು ಬಂಗಾರಪ್ಪ ಜನಸ್ಪಂದನ ಕಾರ್ಯಕ್ರಮ, ನಿಮ್ಮ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನ








