ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರು ಆಯ್ಕೆಯಾಗಿದ್ದಾರೆ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಎದುರಿಸಲು ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ ಎಂದು ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಕಾರ್ಯಕಾರಣಿ ಸಭೆಯಲ್ಲಿ ನಾನೂ ಕೂಡ ರಾಹುಲ್ ಗಾಂಧಿಯವರೇ ವಿರೋಧ ಪಕ್ಷದ ನಾಯಕರಾಗಲು ಸೂಕ್ತ ಎಂದು ತಿಳಿಸಿದ್ದೆ.ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಎದುರಿಸಲು ರಾಹುಲ್ ಗಾಂಧಿ ಅವರು ಸೂಕ್ತ ವ್ಯಕ್ತಿಯಾಗಿದ್ದಾರೆ ಎಂದು ಕಾರ್ಯಕಾರಿಣಿ ಸಭೆಯಲ್ಲಿ ನಾನು ಕೂಡ ಒತ್ತಾಯ ಮಾಡಿದ್ದೆ ಎಂದರು.
ದೇಶದ ಹಿತ ದೃಷ್ಟಿಯಿಂದ ರಾಹುಲ್ ಗಾಂಧಿಯವರು ಲೋಕಸಭೆಯ ವಿರೋಧ ಪಕ್ಷದ ನಾಯಕರು ಆಗಿರುವುದು ಒಳ್ಳೆಯದು.ಹಾಗಾಗಿ ನಾನು ರಾಹುಲ್ ಗಾಂಧಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.