ಬೆಂಗಳೂರು: ರಾಹುಲ್ ಗಾಂಧಿ ಅವರು ನ್ಯಾಯಾಲಯ ಹಾಗೂ ಕಾನೂನಿಗೆ ಗೌರವ ಕೊಟ್ಟು ವಿಚಾರಣೆಗೆ ಹಾಜರಾಗಿದ್ದಾರೆ. ಬಿಜೆಪಿ ನಾಯಕರಾದ ಯತ್ನಾಳ್ ಅವರೇ ಸಿಎಂ ಹುದ್ದೆಗೆ 2,500 ಕೋಟಿ ಹಾಗೂ ಮಾಧ್ಯಮಗಳಲ್ಲಿ ಬಂದಿದ್ದ ವರದಿ ಅನುಸಾರ ಸರ್ಕಾರಿ ಹುದ್ದೆಗೆ ಹಿಂದಿನ ಸರ್ಕಾರದ ರೇಟ್ ಕಾರ್ಡ್ ಅನ್ನು ಜಾಹೀರಾತು ರೂಪದಲ್ಲಿ ಕೊಟ್ಟಿದ್ದೆವು. ಈ ವಿಚಾರದಲ್ಲಿ ರಾಹುಲ್ ಗಾಂಧಿ ಅವರಿಗೂ ಈ ಪ್ರಕರಣಕ್ಕೂ ಸಂಬಂಧವೇ ಇಲ್ಲ. ಆದರೂ ಉದ್ದೇಶಪೂರ್ವಕವಾಗಿ ಅವರನ್ನು ಎಳೆದುತರಲಾಗಿದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿಯವರಲ್ಲಿ ದ್ವೇಷ ಹಾಗೂ ಸೇಡು ತುಂಬಿ ತುಳುಕುತ್ತಿದೆ. ಹೀಗಾಗಿ ಸುಳ್ಳು ಪ್ರಕರಣ ದಾಖಲಿಸಿದ್ದು, ಅದಕ್ಕೆ ಈ ಪ್ರಕರಣವೇ ಉದಾಹರಣೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರು ಆಗಮಿಸಿ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಡಿ.ಕೆ. ಸುರೇಶ್ ಅವರು ಜಾಮೀನು ನೀಡಿದ್ದಾರೆ. ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬಂದು ಬೆಂಬಲ ನೀಡಿದ್ದಾರೆ. ಅವರೆಲ್ಲರಿಗೂ ಧನ್ಯವಾದ ತಿಳಿಸಿದರು.
ಪರಿಷತ್ ಚುನಾವಣೆಯಲ್ಲಿ 3 ಕ್ಷೇತ್ರ ಗೆಲುವು
ಆರು ವಿಧಾನ ಪರಿಷತ್ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೂರು ಕ್ಷೇತ್ರಗಳಲ್ಲಿ ಗೆದ್ದಿದ್ದು, ಅವರಿಗೆ ಪಕ್ಷದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ನಾಳೆ ಲೋಕಸಭಾ ಚುನಾವಣೆ ಫಲಿತಾಂಶ ಕುರಿತು ಚರ್ಚಿಸಲು ‘CWC ಸಭೆ’ ಕರೆದ ಮಲ್ಲಿಕಾರ್ಜುನ ಖರ್ಗೆ