ಹೊಸಪೇಟೆ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದ ಮುಂದಿನ ಪ್ರಧಾನ ಮಂತ್ರಿ ಆಗಲಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಭವಿಷ್ಯ ನುಡಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ರಾಹುಲ್ ಗಾಂಧಿ ಪ್ರಧಾನ ಮಂತ್ರಿ ಆಗಲಿದ್ದಾರೆ ಎಂದು ಹೇಳಿದ್ದಾರೆ.
ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರು ರಾಜಕೀಯ ಪುನರ್ಜನ್ಮ ಕೊಡಿ ಎಂದು ಕೇಳುತ್ತಿದ್ದಾರೆ. ಹೀಗಾಗಿ ಅವರು ಈಗಾಗಲೇ ಸೋಲು ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ತುಕಾರಂ ಎರಡು ಲಕ್ಷ ಮತಗಳ ಅಂತರದ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದ್ದಾರೆ.