ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ಕಾಂಗ್ರೆಸ್ಸಿನ ನಾಯಕ ರಾಹುಲ್ ಗಾಂಧಿಯವರು ಆಯ್ಕೆಯಾಗಿದ್ದಾರೆ ಈ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ಐಡಿಬಿಟಿ ಸಚಿವ ಪ್ರಿಯಾಂಕ ಖರ್ಗೆ ಪ್ರತಿಕ್ರಿಯೆ ನೀಡಿದ್ದು ಇನ್ನು ಮುಂದೆ ಸಂಸತ್ತಿನಲ್ಲಿ ಜನರ ಧ್ವನಿಯಾಗಿ ರಾಹುಲ್ ಗಾಂಧಿ ಇರಲಿದ್ದಾರೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸತ್ ನಲ್ಲಿ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರ ಗುಣಗಾನ ನಡೆಯುತ್ತಿತ್ತು ಈ ವೇಳೆ ವಿರೋಧ ಪಕ್ಷದ ನಾಯಕರನ್ನು ಹೊರಹಾಕಲಾಗುತ್ತಿತ್ತು. ಆದರೆ ಇದೀಗ ಸಂಸತ್ತಿನಲ್ಲಿ ಕೊನೆಗೂ ಜನರ ಧ್ವನಿಯನ್ನು ಕೇಳಬಹುದಾಗಿದೆ. ಪ್ರಸ್ತುತ ಸಮಸ್ಯೆಗಳನ್ನು ಅಲ್ಲಿ ಚರ್ಚಿಸಲಾಗುತ್ತದೆ. ಮೊದಲು ವಿಪಕ್ಷದರನ್ನು ಹೊರಗೆ ಹಾಕಲಾಗುತ್ತಿತ್ತು ಇದೀಗ ರಾಹುಲ್ ಗಾಂಧಿಯವರು ಜನರ ಧ್ವನಿಯಾಗಿ ಸಂಸತ್ತಿನಲ್ಲಿ ಇರಲಿದ್ದಾರೆ ಎಂದು ತಿಳಿಸಿದರು.

ಇನ್ನೂ ರಾಹುಲ್ ಗಾಂಧಿ ಅವರು ವಿಪಕ್ಷ ನಾಯಕರಾಗಿ ಆಯ್ಕೆಯಾದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಕೂಡ ಅಭಿನಂದನೆ ಸಲ್ಲಿಸಿದ್ದು, ಸೇಡಿನ ರಾಜಕಾರಣ ಮತ್ತು ನಿರಂತರವಾದ ವೈಯಕ್ತಿಕ ಚಾರಿತ್ರ್ಯಹನನವನ್ನು ಎದುರಿಸುತ್ತಲೇ ತನ್ನ ದಣಿವರಿಯದ ಹೋರಾಟದ ಮೂಲಕ ಸರ್ವಾಧಿಕಾರಿ ಆಡಳಿತದಿಂದ ದೇಶವನ್ನು ರಕ್ಷಿಸಿದ ರಾಹುಲ್ ಗಾಂಧಿಯವರು ಸಾಧನೆಯ ಮೂಲಕ ಈ ಪದವಿಯನ್ನು ಗಳಿಸಿದ್ದಾರೆ.ಸೈದ್ಧಾಂತಿಕ ಬದ್ಧತೆ, ದೂರದರ್ಶಿತ್ವ ಮತ್ತು ಜನಪರ ಕಾಳಜಿಯ ರಾಹುಲ್ ಗಾಂಧಿಯವರು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಡಳಿತ ಪಕ್ಷಕ್ಕೆ ಸಿಂಹ ಸ್ವಪ್ನರಾಗಲಿದ್ದಾರೆ ಎಂದು ಬರೆದುಕೊಂಡಿದ್ದಾರೆ.

Share.
Exit mobile version