ನವದೆಹಲಿ: ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸಿ ಅಥವಾ ಯಾತ್ರೆಯನ್ನು ಸ್ಥಗಿತಗೊಳಿಸಿ ಎಂಬ ಆರೋಗ್ಯ ಸಚಿವರ ಕರೆಗಳ ಮಧ್ಯೆ ರಾಹುಲ್ ಗಾಂಧಿಯವರ ‘ಭಾರತ್ ಜೋಡೊ ಯಾತ್ರೆ ನಾಳೆ ದೆಹಲಿಯನ್ನು ಪ್ರವೇಶಿಸಲಿದೆ.

ತಮಿಳುನಾಡು, ಕೇರಳ, ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ಯಾತ್ರೆ ಮುಗಿದಿದ್ದು,  ಬಾದರ್‌ಪುರ ಗಡಿಯಿಂದ ಬೆಳಿಗ್ಗೆ 6:30 ಕ್ಕೆ ದೆಹಲಿಯನ್ನು ಪ್ರವೇಶಿಸಲಿದೆ. ಬಳಿಕ ಸಂಜೆ 4:30 ಕ್ಕೆ ರೀಡ್ ಫೋರ್ಟ್‌ನಲ್ಲಿ ಕೊನೆಗೊಳ್ಳುತ್ತದೆ. ಮಾರ್ಗದ ವಿವಿಧೆಡೆ ಯಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆಯಿದೆ.

ಬದರ್‌ಪುರ್‌ನಿಂದ ಕೆಂಪು ಕೋಟೆಯವರೆಗೆ ವಾಹನ ದಟ್ಟಣೆ ಸಂಭವಿಸುವ ಸಾಧ್ಯತೆ ಇದೆ.ಸುಗಮ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಸಾರ್ವಜನಿಕ ಸಾರಿಗೆಯ ಗರಿಷ್ಠ ಬಳಕೆ ಮಾಡುವಂತೆ ಪೊಲೀಸರು ಪ್ರಯಾಣಿಕರನ್ನು ಒತ್ತಾಯಿಸಿದ್ದಾರೆ.

ನಟ, ರಾಜಕಾರಣಿ ಕಮಲ್ ಹಾಸನ್, ಸ್ವಾತಂತ್ರ್ಯ ಹೋರಾಟಗಾರರ ಕುಟುಂಬ ಸದಸ್ಯರು ಮತ್ತು ಕಾಂಗ್ರೆಸ್ ಉನ್ನತ ನಾಯಕರು ಯಾತ್ರೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಯಾತ್ರೆಯಲ್ಲಿ ಕನಿಷ್ಠ 40 ಸಾವಿರದಿಂದ 50 ಸಾವಿರ ಯಾತ್ರಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಚೌಧರಿ ಹೇಳಿದ್ದಾರೆ.

ಮಂಡ್ಯ: ಡಿ.25ರಂದು ಮದ್ದೂರಿನ ಸೋಮನಹಳ್ಳಿಯಲ್ಲಿ ಗುರುವಂದನಾ ಕಾರ್ಯಕ್ರಮ: ಶಿಕ್ಷಕರ ಸಮಾಗಮಕ್ಕೆ ಬೃಹತ್ ವೇದಿಕೆ ಸಜ್ಜು

ಐಪಿಎಲ್ ಹರಾಜು 2023ನಲ್ಲಿ ಯಾರು ಯಾವ ತಂಡಕ್ಕೆ, ಎಷ್ಟಕ್ಕೆ ಮಾರಾಟವಾದರು ಗೊತ್ತಾ? ಇಲ್ಲಿದೆ ಸಂಪೂರ್ಣ ಪಟ್ಟಿ | IPL Mini Auction 2023

Share.
Exit mobile version