ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯುತ್ತಿದ್ದು, ಈ ಯಾತ್ರೆಗೆ ರಾಜ್ಯ ಬಿಜೆಪಿ ಘಟಕ ಕಿಡಿಕಾರಿದ್ದು, ಕಾಂಗ್ರೆಸ್ಸಿಗರೇ ಯಾತ್ರೆಯ ಹೆಸರನ್ನು ಹಿಂದೂ ವಿರೋಧಿ ಯಾತ್ರ ಎಂದು ಬದಲಾಯಿಸಿಕೊಳ್ಳಿ ಎಂದು ಹೇಳಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ತಮಿಳುನಾಡು, ಕೇರಳದಲ್ಲಿ ತೋರಿದ ಹಿಂದೂ ದ್ವೇಷವನ್ನು ರಾಹುಲ್ ಗಾಂಧಿ ಕರ್ನಾಟಕದಲ್ಲೂ ಬಿಡಲಿಲ್ಲ.ಮತಾಂಧರ ಮೂಲಕ ಡಿಜೆ ಹಳ್ಳಿಯ ಹಿಂದೂಗಳ ಮನೆಗೆ ಬೆಂಕಿಹಚ್ಚಲು ಪ್ರಚೋದನೆ ನೀಡಿದ ಸಂಪತ್ ರಾಜ್ ಯಾತ್ರೆಯಲ್ಲಿ ರಾಹುಲ್ ಜೊತೆ ಹೆಜ್ಜೆ ಹಾಕಿದ್ದಾನೆ. ಕಾಂಗ್ರೆಸ್ಸಿಗರೇ ಯಾತ್ರೆಯ ಹೆಸರನ್ನು ಹಿಂದೂ ವಿರೋಧಿ ಯಾತ್ರ ಎಂದು ಬದಲಾಯಿಸಿಕೊಳ್ಳುವಿರಾ? ಎಂದು ಪ್ರಶ್ನಿಸಿದೆ.
ತಮಿಳುನಾಡು, ಕೇರಳದಲ್ಲಿ ತೋರಿದ ಹಿಂದೂ ದ್ವೇಷವನ್ನು @RahulGandhi ಕರ್ನಾಟಕದಲ್ಲೂ ಬಿಡಲಿಲ್ಲ.
ಮತಾಂಧರ ಮೂಲಕ ಡಿಜೆ ಹಳ್ಳಿಯ ಹಿಂದೂಗಳ ಮನೆಗೆ ಬೆಂಕಿಹಚ್ಚಲು ಪ್ರಚೋದನೆ ನೀಡಿದ ಸಂಪತ್ ರಾಜ್ ಯಾತ್ರೆಯಲ್ಲಿ ರಾಹುಲ್ ಜೊತೆ ಹೆಜ್ಜೆ ಹಾಕಿದ್ದಾನೆ.
ಕಾಂಗ್ರೆಸ್ಸಿಗರೇ, ಯಾತ್ರೆಯ ಹೆಸರನ್ನು #HinduVirodhiYatra ಎಂದು ಬದಲಾಯಿಸಿಕೊಳ್ಳುವಿರಾ? pic.twitter.com/XSclz7RkBT
— BJP Karnataka (@BJP4Karnataka) October 1, 2022
ಕೇರಳದಲ್ಲೂ ಹಿಂದೂ ದ್ವೇಷವನ್ನು ರಾಹುಲ್ ಗಾಂಧಿ ಮುಂದುವರೆಸಿದರು. ನಡುಬೀದಿಯಲ್ಲಿ ಗೋವಿನ ತಲೆ ಕಡಿದ ಯುವ ಕಾಂಗ್ರೆಸ್ ಮುಖಂಡನೊಂದಿಗೆ ಪಾದಯಾತ್ರೆ ಮಾಡುವ ಮೂಲಕ ರಾಹುಲ್ ಗಾಂಧಿ ಬಹುಸಂಖ್ಯಾತ ಹಿಂದೂಗಳನ್ನು ಅಪಮಾನಿಸಿದ್ದಾರೆ. ಹಿಂದೂಗಳ ಪೂಜನೀಯ ಗೋವಿನ ಹತ್ಯೆಗೆ ರಾಹುಲ್ ಗಾಂಧಿ ಅವರ ಸಮ್ಮತಿಯಿದೆಯೇ? ಎಂದು ಹೇಳಿದೆ.
ಕೇರಳದಲ್ಲೂ ಹಿಂದೂ ದ್ವೇಷವನ್ನು @RahulGandhi ಮುಂದುವರೆಸಿದರು.
ನಡುಬೀದಿಯಲ್ಲಿ ಗೋವಿನ ತಲೆ ಕಡಿದ ಯುವ ಕಾಂಗ್ರೆಸ್ ಮುಖಂಡನೊಂದಿಗೆ ಪಾದಯಾತ್ರೆ ಮಾಡುವ ಮೂಲಕ ರಾಹುಲ್ ಗಾಂಧಿ ಬಹುಸಂಖ್ಯಾತ ಹಿಂದೂಗಳನ್ನು ಅಪಮಾನಿಸಿದ್ದಾರೆ.
ಹಿಂದೂಗಳ ಪೂಜನೀಯ ಗೋವಿನ ಹತ್ಯೆಗೆ ರಾಹುಲ್ ಗಾಂಧಿ ಅವರ ಸಮ್ಮತಿಯಿದೆಯೇ?#HinduVirodhiYatra pic.twitter.com/sEW3mOYOj0
— BJP Karnataka (@BJP4Karnataka) October 1, 2022
ರಾಹುಲ್ ಗಾಂಧಿ ಯಾತ್ರೆ ಹಿಂದೂ ವಿರೋಧಿ ಯಾತ್ರೆಯಾಗಿ ಬದಲಾಗುತ್ತಿದೆ. ತಮಿಳುನಾಡಿನಿಂದ ಆರಂಭಗೊಂಡ ಯಾತ್ರೆ ಹೆಜ್ಜೆ ಹೆಜ್ಜೆಗೂ ಹಿಂದೂಗಳನ್ನು ಅವಮಾನಿಸುತ್ತಿದೆ. ಹಿಂದೂ ಸಮಾಜವನ್ನು ಕೆಣಕಿ ನಿಮ್ಮ ಮತಬ್ಯಾಂಕ್ ಗಟ್ಟಿಗೊಳಿಸುವ ಹುನ್ನಾರವೇ ಇದು?