ಬೆಂಗಳೂರು: ‘ರಾಹುಲ್ ಗಾಂಧಿ ಅವರ ನಡಿಗೆ ಜನಸಾಮಾನ್ಯರ ಕಡೆಗೆ ಆಗಿತ್ತು. ದೇಶಾದ್ಯಂತ ಜನಸಾಮಾನ್ಯರ ಬಳಿಗೆ ಹೋಗಿ ಅವರ ನೋವನ್ನು ಖುದ್ದಾಗಿ ಆಲಿಸಿರುವ ಏಕೈಕ ನಾಯಕ ರಾಹುಲ್ ಗಾಂಧಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದ್ದಾರೆ.
ರಾಜ್ಯದಲ್ಲಿ ಭಾರತ ಐಕ್ಯತಾ ಯಾತ್ರೆ ಯಶಸ್ವಿ ನಂತರ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರು, ರಾಜ್ಯದ ಜನತೆಯ ಸಹಕಾರದಿಂದ ಕರ್ನಾಟಕದಲ್ಲಿ ಭಾರತ ಐಕ್ಯತಾ ಯಾತ್ರೆ ಯಶಸ್ವಿಯಾಗಿ ನಡೆದಿದೆ. ಇದಕ್ಕೆ ನಿಮ್ಮ ಕ್ಯಾಮೆರಾ ಕಣ್ಣುಗಳೇ ಸಾಕ್ಷಿ.
ರಾಷ್ಟ್ರ ರಾಜಕಾರಣವನ್ನು ಬೇರೆ ದಿಕ್ಕಿನೆಡೆ ತೆಗೆದುಕೊಂಡು ಹೋಗುವ ಆಂದೋಲನವಾಗಿ ಈ ಯಾತ್ರೆ ಸಾಗಿದೆ. ಇದು ಕೇವಲ ಯಾತ್ರೆಯಾಗಿ ಉಳಿದಿಲ್ಲ. ಇದರಲ್ಲಿ ನೀವು ನಾವು ಕಂಡಿದ್ದು, ಯುವಕರು, ಮಹಿಳೆಯರು, ಪುಟಾಣಿ ಮಕ್ಕಳ ಪ್ರೀತಿ ವಿಶ್ವಾಸ. ಇಂದಿರಾ ಗಾಂಧಿ ಅವರನ್ನು ನೋಡಲು ಜನ ಹೇಗೆ ನೂಕುನುಗ್ಗಲು ಮಾಡಿಕೊಂಡು ಬರುತ್ತಿದ್ದರೋ ಅದೇರೀತಿ ರಾಹುಲ್ ಗಾಂಧಿ ಅವರನ್ನು ನೋಡಲು ನೂರಾರು ಕಿ.ಮೀ ದೂರದಿಂದ ಮಕ್ಕಳು ತಮ್ಮ ತಂದೆ ತಾಯಂದಿರ ಜತೆ ಆಗಮಿಸುತ್ತಿದ್ದರು. ರಾಹುಲ್ ಗಾಂಧಿ ಅವರು ಸಾವಿರಾರು ಜನರ ಜತೆ ಮಾತನಾಡಿ, ನೀವು ಏನು ಮಾಡುತ್ತಿದ್ದೀರಿ, ಏನು ಓದುತ್ತಿದ್ದೀರಿ, ಮುಂದೆ ಏನು ಮಾಡುತ್ತೀರಿ ಎಂದು ಕೇಳಿ ಅವರ ಅಭಿಪ್ರಾಯ ಪಡೆದರು ಎಂದರು.
ಬೆಳಗ್ಗೆ 5.30ಕ್ಕೆ ಎದ್ದು, 6.25ರ ವೇಳೆಗೆ ಪಾದಯಾತ್ರೆ ಆರಂಭಿಸುತ್ತಿದ್ದರು. ನಿಗದಿತ ನಡಿಗೆ ವೇಳಾಪಟ್ಟಿಯಲ್ಲಿ ಸ್ವಲ್ಪವೂ ಬದಲಾವಣೆ ಮಾಡಲಿಲ್ಲ. ನಾನು ತಡವಾಗಿ ಯಾತ್ರೆ ಆರಂಭಿಸೋಣ ಎಂದು ಮನವಿ ಮಾಡಿದಾಗ ಅದಕ್ಕೆ ಒಪ್ಪಲಿಲ್ಲ. ಇದು ನಮ್ಮಿಬ್ಬರ ನಡಿಗೆ ಮಾತ್ರವಲ್ಲ. 3500 ಕಿ.ಮೀ ದೂರ ಸಾಗಬೇಕು. ಹೀಗಾಗಿ ಯಾವುದೇ ಬದಲಾವಣೆ ಸಾಧ್ಯವಿಲ್ಲ ಎಂದರು. ಸಂಜೆ 4 ರಿಂದ ಮತ್ತೆ ಹೆಜ್ಜೆ ಹಾಕಿ ಎಲ್ಲಾ ಜನರ ಜತೆ ಮಾತನಾಡುತ್ತಿದ್ದರು ಎಂದು ಹೇಳಿದರು.
‘ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್ಶಿಪ್’ ಗೆದ್ದ ‘ಬೆಂಗಳೂರು ಬಾಯ್ಸ್’: ‘ರೋಹನ್, ಅಭಯ್, ನಿಖಿಲೇಶ್’ಗೆ ಪ್ರಶಸ್ತಿ
ಚಾಮರಾಜನಗರದಲ್ಲಿ ಆದಿವಾಸಿಗಳು, ಆಕ್ಸಿಜನ್ ದುರಂತದಲ್ಲಿ ಮಡಿದವರ ಕುಟುಂಬದವರು, ರಾಯಚೂರಿನಲ್ಲಿ ದೇವದಾಸಿಗಳು ಸೇರಿದಂತೆ ನರೇಗಾ ಕಾರ್ಮಿಕರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಐಟಿ ಉದ್ಯೋಗಿಗಳು, ನಿರುದ್ಯೋಗಿ ಯುವಕರು, ರೈತರು, ನಿವೃತ್ತ ಸೈನಿಕರು, ವ್ಯಾಪಾರಸ್ಥರು, ಎಲ್ಲ ವರ್ಗದವರ ಜತೆ ಸಂವಾದ ನಡೆಸಿದರು. ವಿಕಲಚೇತನ ಅತಿಥಿ ಶಿಕ್ಷಕಿ, ಮೆಕಾನಿಕ್ ಅವರ ಜತೆಗೆ ಚರ್ಚೆ ಸಂದರ್ಭದಲ್ಲಿ ಅವರು ಬಹಳ ಸ್ಪೂರ್ತಿದಾಯಕ ಅನುಭವ ಪಡೆದರು ಎಂದರು.
ರಾಹುಲ್ ಗಾಂಧಿ ಅವರ ದೈಹಿಕ ಕ್ಷಮತೆ ಒಂದೆಡೆಯಾದರೆ ಅವರ ಮಾನಸಿಕ ಕ್ಷಮತೆ ಬಹಳ ಬಲಿಷ್ಟವಾಗಿದೆ. ಅವರು ದೇಶ ಹಾಗೂ ಪಕ್ಷಕ್ಕಾಗಿ ಪ್ರಧಾನಮಂತ್ರಿ ಹುದ್ದೆ ಹಾಗೂ ಪಕ್ಷದ ಅಧ್ಯಕ್ಷ ಸ್ಥಾನ ತ್ಯಾಗ ಮಾಡಿದವರು ಎಂದು ತಿಳಿಸಿದರು.
ಯಾತ್ರೆ ಸಂದರ್ಭದಲ್ಲಿ ಮಾಧ್ಯಮ ಮಿತ್ರರೊಬ್ಬರು ರಾಹುಲ್ ಗಾಂಧಿ ಅವರಿಗೆ ಅಧಿಕಾರ ವ್ಯಾಮೋಹ ಇಲ್ಲದ ನೀವು ಈ ಯಾತ್ರೆ ಮಾಡುತ್ತಿರುವುದೇಕೆ ಎಂದು ಕೇಳಿದಾಗ, ನೆಹರೂ ಅವರಿಂದ ಹಿಡಿದು ನಮ್ಮ ಕುಟುಂಬದ ಎಲ್ಲರಿಗೂ ಈ ದೇಶದ ಜನ ತೋರಿರುವ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಈ ಋಣ ತೀರಿಸಲು ಸಾಧ್ಯವಿಲ್ಲ. ನಮಗೆ ಅಧಿಕಾರ ಬರುತ್ತದೆ, ಹೋಗುತ್ತದೆ. ನಾನು ಈ ಹಿಂದೆಯೇ ಅಧಿಕಾರ ಅನುಭವಿಸಬಹುದಾಗಿತ್ತು. ಆದರೆ ಅವರ ಪ್ರೀತಿಯ ಋಣ ತೀರಿಸಲು ಅಸಾಧ್ಯ. ಹೀಗಾಗಿ ಅವರ ನೋವು, ಕಷ್ಟ ಆಲಿಸುತ್ತಿದ್ದೇನೆ. ನಮ್ಮ ಕೈಲಾದ ನೆರವು ನೀಡುತ್ತೇವೆ ಎಂದು ಉತ್ತರಿಸಿದರು.
ಶಿವಮೊಗ್ಗ: ಅ.28ರಂದು ನಡೆಯಬೇಕಿದ್ದ ‘ಜಿಲ್ಲಾ ಮಟ್ಟದ ಯುವ ಉತ್ಸವ-2022’ ಕಾರ್ಯಕ್ರಮ ಮುಂದೂಡಿಕೆ
ನಾವು ಮೊದಲ ದಿನ ಗುಂಡ್ಲುಪೇಟೆಯಿಂದ ಈ ಯಾತ್ರೆ ಆರಂಭಿಸಿದೆವು. ನಂತರ ಬದನವಾಳು ಗ್ರಾಮದಲ್ಲಿ ಸವರ್ಣೀಯರು ಹಾಗೂ ದಲಿತರ ಮಧ್ಯೆ ದಶಕಗಳಿಂದ ಇದ್ದ ವೈಮನಸ್ಸಿಗೆ ಅಂತ್ಯವಾಡಿ, ಅವರ ಮಧ್ಯೆ ನಾಶವಾಗಿದ್ದ ಸಾಮರಸ್ಯವನ್ನು ಮತ್ತೆ ಬೆಸೆದು, ಅಲ್ಲಿ ರಸ್ತೆ ನಿರ್ಮಾಣ ಮಾಡಿದ್ದೇವೆ. ಅದು ಸಣ್ಣ ರಸ್ತೆ. ಅದಕ್ಕೆ ಭಾರತ ಜೋಡೋ ರಸ್ತೆ ಎಂದು ಹೆಸರಿಟ್ಟು, ಎರಡೂ ಸಮಾಜದವರ ಜತೆ ಒಟ್ಟಿಗೆ ಕೂತು ಊಟ ಮಾಡಿ ಅವರಲ್ಲಿ ಮತ್ತೆ ಬಾಂಧವ್ಯ ಬೆಸೆಯಲಾಗಿದೆ. ಈ ಯಾತ್ರೆ ಯಶಸ್ಸಿಗೆ ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕು? ಎಂದು ಪ್ರಶ್ನಿಸಿದರು.
ನಾನು ಬೇರೆ ಪಕ್ಷದ ಟೀಕೆ ಬಗ್ಗೆ ಚರ್ಚೆ ಮಾಡುವುದಿಲ್ಲ. ಈ ಐಕ್ಯತಾ ಯಾತ್ರೆ ಎಲ್ಲರ ಬದುಕಿನ ಭಾಗವಾಗಿದೆ. ಬಳ್ಳಾರಿಯಲ್ಲಿ ರಾಹುಲ್ ಗಾಂಧಿ ಅವರ ಗಮನ ಸೆಳೆದದ್ದು ಎಂದರೆ ಬಳ್ಳಾರಿಯಲ್ಲಿ ಜೀನ್ಸ್ ತಯಾರಿಕಾ ಉದ್ದಿಮೆಗಳ ಜತೆಗಿನ ಸಂವಾದ. ಭಾರತದ ಜೀನ್ಸ್ ರಾಜಧಾನಿ ಬಳ್ಳಾರಿ ಎಂದರು. ಕಡಿಮೆ ಬೆಲೆಗೆ ಅತ್ಯುತ್ತಮ ಜೀನ್ಸ್ ಪ್ಯಾಂಟ್ ತಯಾರು ಮಾಡುತ್ತಿದ್ದಾರೆ. ಇಂತಹ ಸಂಪನ್ಮೂಲದ ಉದ್ದಿಮೆಯನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು. ರಾಹುಲ್ ಗಾಂಧಿ ಅವರು ರೈತರ ವಿಚಾರ ಕೂಡ ತಿಳಿದುಕೊಂಡರು ಎಂದರು.
‘ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್ಶಿಪ್’ ಗೆದ್ದ ‘ಬೆಂಗಳೂರು ಬಾಯ್ಸ್’: ‘ರೋಹನ್, ಅಭಯ್, ನಿಖಿಲೇಶ್’ಗೆ ಪ್ರಶಸ್ತಿ
ರಾಹುಲ್ ಗಾಂಧಿ ಅವರು ಕೇವಲ ರಾಷ್ಟ್ರೀಯ ಸಮಸ್ಯೆ ಮಾತ್ರವಲ್ಲ, ರಾಜ್ಯದಲ್ಲಿನ ಸಮಸ್ಯೆ ಬಗ್ಗೆಯೂ ಹೆಚ್ಚು ಗಮನ ಹರಿಸಿದರು. ರಾಜ್ಯದಲ್ಲಿ ದಕ್ಷ ಆಡಳಿತ ನೀಡಬೇಕು, ಭ್ರಷ್ಟ ಸರ್ಕಾ ಕಿತ್ತೊಗೆಯಬೇಕು, ಯುವಕರಿಗೆ ಆಗುತ್ತಿರುವ ಮೋಸ ತಡೆಯಬೇಕು ಎಂದು ಚಿಂತನೆ ನಡೆಸಿದ್ದಾರೆ. ಸ್ಥಳೀಯ ಭಾಷೆ, ಕೇಂದ್ರದ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಆದ್ಯತೆ, ಕನ್ನಡದ ಸ್ವಾಭಿಮಾನಕ್ಕೆ ಧಕ್ಕೆ ಆಗಬಾರದು ಎಂಬ ಸ್ಪಷ್ಟ ಸಂದೇಶ ನೀಡಿದರು. ನಿರುದ್ಯೋಗಿ ಯುವಕರ ಸಮಸ್ಯೆಯನ್ನು ಪ್ರತ್ಯೇಕವಾಗಿ ಆಲಿಸಿದ್ದಾರೆ ಎಂದು ಹೇಳಿದರು.
ಅವರು ಈ ಯಾತ್ರೆಯಲ್ಲಿ ಎಲ್ಲಾ ಜಾತಿ, ಧರ್ಮಗಳ ಮಂದಿರಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದಸರಾ ಸಮಯದಲ್ಲಿ ರಾಜ್ಯಕ್ಕೆ ಆಗಮಿಸಿ, ನಮ್ಮ ಸಂಸ್ಕಾರ ಹಾಗೂ ಸಂಪ್ರದಾಯದಂತೆ ಹಬ್ಬ ಆಚರಣೆ ಮಾಡಿ, ಅರ್ಧ ದಿನ ಯಾತ್ರೆಯಲ್ಲಿ ಕೂಡ ಹೆಜ್ಜೆ ಹಾಕಿದರು ಎಂದು ತಿಳಿಸಿದರು.
ರಾಹುಲ್ ಗಾಂಧಿ ಅವರು ಸೋನಿಯಾ ಗಾಂಧಿ ಅವರ ಶೂ ಲೇಸ್ ಹಾಕಿದ್ದಕ್ಕೆ ಬಿಜೆಪಿ ತನ್ನ ಸಾಮಾಜಿಕ ಜಾಲತಾಣವೆಂಬ ಸುಳ್ಳಿನ ಕಾರ್ಖಾನೆ ಮೂಲಕ ಟೀಕೆ ಮಾಡಿದ್ದರು. ಆದರೆ, ತಾಯಿ ಮಗನ ಬಾಂಧವ್ಯ, ಜನರ ಪ್ರೀತಿ, ಅವರ ಅಕ್ಕರೆ ನಿಮ್ಮ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ. ಇದೆಲ್ಲವನ್ನೂ ಜನ ಕಣ್ಣಾರೆ ನೋಡಿದ್ದಾರೆ ಎಂದರು.