ಬೆಂಗಳೂರು : ಕಳೆದ ವರ್ಷ ಕಾಂಗ್ರೆಸ್ ನಾಯಕ ಭಾರತ್ ರ್ಯಾಲಿ ಮಾಡಿ ಇಡೀ ದೇಶದ ಜನತೆಯ ಗಮನ ಸೆಳೆದಿದ್ದರು ಅದಲ್ಲದೆ ಈ ಒಂದು ಯಾತ್ರೆ ಪರಿಣಾಮ ಕರ್ನಾಟಕದಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಗೆಲ್ಲಲು ಕೂಡ ಸಹಕಾರಿಯಾಯಿತು. ಇದೀಗ ಮತ್ತೆ ರಾಹುಲ್ ಗಾಂಧಿ ಭಾರತ ಚೌಡಯ್ಯ ಯಾತ್ರೆ ಆರಂಭಿಸಿದ್ದು ಅಸ್ಸಾಂನಲ್ಲಿ ಈ ಒಂದು ಯಾತ್ರೆಗೆ ಅಲ್ಲಿನ ಪೊಲೀಸರು ಅಡ್ಡಿಪಡಿಸಿರುವ ವಿಚಾರವಾಗಿ ಕಾಂಗ್ರೆಸ್ ನಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ರಾಹುಲ್ ಗಾಂಧಿ ಭಾರತ ಜೋಡೋ ನ್ಯಾಯ ಯಾತ್ರೆಗೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ಬದ್ರವಧಾನ್ ದೇವಸ್ಥಾನ ಪ್ರವೇಶಕ್ಕೆ ಅನುಮತಿ ನಿರಾಕರಿಸಿದ್ದರು.ರಾಹುಲ್ ಗಾಂಧಿ ಯಾತ್ರೆ ವೇಳೆ ಕಲ್ಲು ತೂರಾಟ ನಡೆದಿದ್ದಕ್ಕೆ ತೀವ್ರವಾಗಿ ಖಂಡಿಸಲಾಗುತ್ತಿದೆ. ಆದ್ದರಿಂದ ಇಂದು ಬೆಂಗಳೂರು ಸೇರಿದಂತೆ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ತಿಳಿದುಬಂದಿದೆ.
ಫ್ರೀಡಂ ಪಾರ್ಕ್ ನಲ್ಲಿಂದು ಬೆಳಗ್ಗೆ 11:30ಕ್ಕೆ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. ಈ ಒಂದು ಪ್ರತಿಭಟನೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಸೇರಿದಂತೆ ಸಚಿವರು ಶಾಸಕರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.ಅಲ್ಲದೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಲಾಗುತ್ತದೆ.