ರಾಯಚೂರು : ಕೂಲಿ ಕೆಲಸ ಮಾಡಿಕೊಂಡಿದ್ದ ತಾಯಿಗೆ ಅನಾರೋಗ್ಯ ಕಾಡುತ್ತಿತ್ತು. ಇದರಿಂದ ಮನನೊಂದ ತಾಯಿ ಮಗಳ ಜೊತೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಮಾಳಮ್ಮ (45) ಹಾಗೂ ಮಗಳು ಅಮೃತ (12) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು ಎಂದು ತಿಳಿದು ಬಂದಿದೆ.ತಾಯಿ ಮಾಳಮ್ಮ ಕೂಲಿ ಕೆಲಸ ಮಾಡಿಕೊಂಡಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದರು. ಇದೇ ಕಾರಣಕ್ಕೆ ಮನನೊಂದು ತನ್ನ ಜೊತೆ ಮಗಳ ಸಮೇತ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಲಿಂಗಸುಗೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.