ರಾಯಚೂರು : ಕಳೆದ ಎರಡು ದಿನಗಳ ಹಿಂದೆ ಶಿಕ್ಷಕರ ದಿನಾಚರಣೆ ದಿನದಂದಲೇ ರಾಯಚೂರಿನಲ್ಲಿ ಭೀಕರ ಅಪಘಾತ ಒಂದು ಸಂಭವಿಸಿತ್ತು. ಶಾಲಾ ಬಸ್ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 15 ಮಕ್ಕಳಿಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ನಡೆದಿತ್ತು.
ಇದೀಗ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಗಂಭೀರವಾಗಿ ಗಾಯಗೊಂಡ ಎಲ್ಲ 15 ಮಕ್ಕಳಿಗೆ ಚೆಕ್ ವಿತರಣೆ ಮಾಡಲಾಯಿತು. ಕೆ ಎಸ್ ಆರ್ ಟಿ ಸಿ ಸಂಸ್ಥೆ ನೀಡಿದ್ದ ಚೆಕ್ ವಿತರಿಸಿದ ಶಾಸಕ ದದ್ದಲ್, ಗಂಭೀರವಾಗಿ ಗಾಯಕೊಂಡ ಮೂರು ಮಕ್ಕಳಿಗೆ 3 ಲಕ್ಷ ಚೆಕ್ ವಿತರಣೆ ಮಾಡಲಾಯಿತು. ಕೈ ಕಾಲುಗಳಿಗೆ ಗಾಯವಾಗಿರುವ 10 ಮಕ್ಕಳಿಗೆ ತಲಾ 1 ಲಕ್ಷ ರೂಪಾಯಿ ಚೆಕ್ ವಿತರಿಸಲಾಯಿತು.
ಇನ್ನು ಸಣ್ಣ ಪುಟ್ಟ ಗಾಯಗೊಂಡ 50,000 ನೀಡಲಾಯಿತು. ಗಾಯಗೊಂಡ ಎಲ್ಲಾ ಮಕ್ಕಳ ಆಸ್ಪತ್ರೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಮಾಹಿತಿ ನೀಡಿದರು. ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆಯ ದಿವಸವೇ ಈ ಒಂದು ಭೀಕರ ಅಪಘಾತ ಸಂಭವಿಸಿತ್ತು.