ಹಾವೇರಿ: ಜಿಲ್ಲೆಯಲ್ಲಿ ರಸಗೊಬ್ಬರ ಮಾರಾಟ ಮಳಿಗೆಯ ಮೇಲೆ ಕೃಷಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ 76 ಕ್ವಿಂಟಾಲ್ ನಕಲಿ ರಸಗೊಬ್ಬರವನ್ನು ವಶಕ್ಕೆ ಪಡೆದಿದ್ದಾರೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಕೃಷಿ ಅಧಿಕಾರಿಗಳಿಂದ ಈ ದಾಳಿ ನಡೆಸಲಾಗಿದೆ. ಸ್ವಸ್ತಿಕ್ ಆಗ್ರೋ ಸೆಂಟರ್ ನಲ್ಲಿ 76 ಕ್ವಿಂಟಾಲ್ ನಕಲಿ ಗೊಬ್ಬರವನ್ನು ಕೃಷಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಸಹಾಯಕ ಕೃಷಿ ನಿರ್ದೇಶಕಿ ಶಾಂತಾಮಣಿ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ನಕಲಿ ರಸಗೊಬ್ಬರ ಮಾರಾಟ ಮಾಡುತ್ತಿದ್ದ ಸಂಬಂಧ ರಾಣೆಬೆನ್ನೂರು ಟೌನ್ ಪೊಲೀಸ್ ಠಾಣೆಯಲ್ಲಿ ರಸಗೊಬ್ಬರ ಮಾರಾಟಗಾರರ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಬಾಹ್ಯಾಕಾಶ ಸಂಶೋಧನೆಯಲ್ಲಿ ಭಾರತ ಈ ದಿನ ಹೊಸ ಮೈಲಿಗಲ್ಲು ಸಾಧಿಸಿದೆ: ಸಿಎಂ ಸಿದ್ಧರಾಮಯ್ಯ
BIG NEWS: ‘ಮಾಸಿದ ರಾಷ್ಟ್ರಧ್ವಜ’ ಹಾರಿಸಿ ಅಪಮಾನ ಮಾಡಿದ ‘PDO’ಗೆ ಶಾಕ್: ವಿವರಣೆ ಕೇಳಿ ‘EO ನೋಟಿಸ್’