ದೆಹಲಿ: ಪಂಜಾಬಿ ಗಾಯಕ ಸಿಧು ಮೂಸೆವಾಲಾ(Sidhu Moose Wala) ಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (National Investigation Agency– NIA) ಶಂಕಿತ ಭಯೋತ್ಪಾದಕ ಗ್ಯಾಂಗ್ಗಳಿಗೆ ಸಂಬಂಧಿಸಿದಂತೆ ದೆಹಲಿ, ಎನ್ಸಿಆರ್, ಹರಿಯಾಣ ಮತ್ತು ಪಂಜಾಬ್ನ ವಿವಿಧ ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಎನ್ಐಎ ಇಂದು ಉತ್ತರ ಭಾರತದಾದ್ಯಂತ ಸುಮಾರು 50 ಸ್ಥಳಗಳಲ್ಲಿ ದಾಳಿ ನಡೆಸಿದೆ. ಪ್ರಮುಖ ಆರೋಪಿಗಳಾದ ಲಾರೆನ್ಸ್ ಬಿಷ್ಣೋಯ್, ಗೋಲ್ಡೀ ಬ್ರಾರ್ ಅವರಿಗೆ ಸೇರಿದ ಹಲವು ಸ್ಥಳಗಳ ಮೇಲೆ ದಾಳಿ ನಡೆಸಿದೆ.
National Investigation Agency (NIA) is conducting searches at various places in Delhi, NCR, Haryana and Punjab in connection with suspected terror gangs linked to the killing of Punjabi singer Sidhu Moose Wala: Sources pic.twitter.com/H9JTiCHQIu
— ANI (@ANI) September 12, 2022
ಹರ್ಯಾಣ, ಪಂಜಾಬ್, ರಾಜಸ್ಥಾನ, ದೆಹಲಿ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಎನ್ಐಎ ಸಿಬ್ಬಂದಿ ಶೋಧ ಆರಂಭಿಸಿದ್ದಾರೆ. ಕೆಲವು ಆರೋಪಿಗಳು ಭಯೋತ್ಪಾದಕರೊಂದಿಗೆ ಸಂಬಂಧ ಹೊಂದಿರುವ ಬಗ್ಗೆ ಎನ್ಐಎ ಮಾಹಿತಿ ಕಲೆ ಹಾಕುತ್ತಿದೆ.
ಪಂಜಾಬ್ ಚುನಾವಣೆಗೂ ಮುನ್ನ ಕಾಂಗ್ರೆಸ್ ಸೇರಿದ್ದ ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಅವರನ್ನುಮೇ 29 ರಂದು ಪಂಜಾಬ್ನ ಮಾನ್ಸಾ ಜಿಲ್ಲೆಯ ಜವಾಹರ್ಕೆ ಗ್ರಾಮದಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು.
BIGG NEWS : ಅಕ್ರಮವಾಗಿ ಪತ್ನಿ ಖಾತೆಗೆ 2.69 ಕೋಟಿ ರೂ. ವರ್ಗಾಯಿಸಿದ ಬ್ಯಾಂಕ್ ಸಿಬ್ಬಂದಿ!
BREAKING NEWS : ಬಿಜೆಪಿ ಮುಖಂಡನ ಹನಿ ಟ್ರ್ಯಾಪ್ ಪ್ರಕರಣ : ಮಂಡ್ಯ ಪೊಲೀಸರಿಂದ ಮತ್ತೊಬ್ಬ ಆರೋಪಿ ಅರೆಸ್ಟ್