ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ ಮಂಗಳೂರು-ಕಬಕ ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.
ಈ ವಿಸ್ತರಣೆಯು ಮಂಗಳೂರು, ಪುತ್ತೂರು ಮತ್ತು ಸುಬ್ರಹ್ಮಣ್ಯ ನಡುವೆ ಪ್ರಯಾಣಿಸುವ ದೈನಂದಿನ ಪ್ರಯಾಣಿಕರಿಗೆ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ಹೆಚ್ಚಿನ ಅನುಕೂಲವನ್ನು ಒದಗಿಸುತ್ತದೆ ಎಂದು ಕ್ಯಾಪ್ಟನ್ ಚೌಟ ಹೇಳಿದರು.
ಹೊಸ ರೈಲು ಸಮಯ
ಮಂಗಳೂರು ಸೆಂಟ್ರಲ್-ಕಬಕ ಪುತ್ತೂರು-ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ ರೈಲು (56625) ಮಂಗಳೂರು ಸೆಂಟ್ರಲ್ನಿಂದ ಬೆಳಗ್ಗೆ 4 ಗಂಟೆಗೆ ಹೊರಟು ಕಬಕ-ಪುತ್ತೂರು ತಲುಪಿ ಬೆಳಗ್ಗೆ 6.30ಕ್ಕೆ ಸುಬ್ರಹ್ಮಣ್ಯ ರಸ್ತೆ ತಲುಪಲಿದೆ.
* 56626 ಸಂಖ್ಯೆಯ ರೈಲು ಸುಬ್ರಹ್ಮಣ್ಯ ರಸ್ತೆಯಿಂದ ಬೆಳಗ್ಗೆ 7 ಗಂಟೆಗೆ ಹೊರಟು ಕಬಕ-ಪುತ್ತೂರು ತಲುಪಿ ಬೆಳಗ್ಗೆ 9.30ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ.
ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ ರೈಲು (56627) ಮಂಗಳೂರು ಸೆಂಟ್ರಲ್ನಿಂದ ಸಂಜೆ 5.45ಕ್ಕೆ ಹೊರಟು ಸಂಜೆ 7.03ಕ್ಕೆ ಪುತ್ತೂರಿಗೆ ತಲುಪಿ, ಎರಡು ನಿಮಿಷಗಳ ನಿಲುಗಡೆಯ ನಂತರ ರಾತ್ರಿ 8.10ಕ್ಕೆ ಸುಬ್ರಹ್ಮಣ್ಯ ರಸ್ತೆ ತಲುಪಲಿದೆ.