ಕೋಟಾ(ರಾಜಸ್ಥಾನ): ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ಪ್ರವಾಹದಲ್ಲಿ ಮುಳುಗಿದ ಸಿಲುಕಿದ ಸೇತುವೆಯ ಮೇಲೆ ರೈಲ್ವೇ ಸ್ಟೇಷನ್ ಮಾಸ್ಟರೊಬ್ಬರು ಕಾರು ಚಲಾಯಿಸಲು ಯತ್ನಿಸಿದ್ದಾರೆ. ಈ ವೇಳೆ ಕಾರು ನದಿಯಲ್ಲಿ ಕೊಚ್ಚಿಹೋದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬುಂದಿಯ ಶ್ರೀನಗರ ರೈಲ್ವೆ ನಿಲ್ದಾಣದಲ್ಲಿ ನಿಯೋಜನೆಗೊಂಡಿದ್ದ ಜೈಪುರದ ಜಂತಾ ಕಾಲೋನಿ ನಿವಾಸಿ ಮನೀಶ್ ಮೇಘವಾಲ್ ಅವರು ಕರ್ತವ್ಯ ಮುಗಿಸಿ ಹಿಂತಿರುಗುತ್ತಿದ್ದಾಗ ಬುಧವಾರ ತಡರಾತ್ರಿ ಈ ಘಟನೆ ನಡೆದಿದೆ.
ಮೇಘವಾಲ್ ಅವರ ಕಾರು ನಮನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಿತಾವಾ ನದಿಗೆ ಬಿದ್ದಿದೆ. ಗುರುವಾರ ಮಧ್ಯಾಹ್ನ ಸುಮಾರು 15 ಗಂಟೆಗಳ ಯತ್ನದ ಕಾರ್ಯಾಚರಣೆಯ ನಂತರ ಮೃತದೇಹವು ಸ್ಥಳದಿಂದ 5-6 ಕಿಲೋಮೀಟರ್ ದೂರದಲ್ಲಿ ಪತ್ತೆಯಾಗಿದೆ. ಆದ್ರೆ, ಕಾರ ಇನ್ನೂ ಪತ್ತೆಯಾಗಿಲ್ಲ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ಸ್ಟೇಷನ್ ಹೌಸ್ ಅಧಿಕಾರಿ (ಎಸ್ಎಚ್ಒ) ಮಹೇಂದ್ರ ಸಿಂಗ್ ತಿಳಿಸಿದ್ದಾರೆ.
BIGG NEWS : ರಾಜ್ಯದ ಜಿಲ್ಲೆಯ ಯುವ ಜನರಿಗೆ `ಅಗ್ನಿವೀರ್ ನೇಮಕಾತಿ’ಗೆ ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ
BREAKING NEWS : ಮಂಗಳೂರಿನ ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಮಂಗಳಪೇಟೆಗೆ ಮೃತದೇಹ ಶಿಫ್ಟ್