ನವದೆಹಲಿ: ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ಸ್ಪಷ್ಟಪಡಿಸಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬುಧವಾರ ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ಈ ವಿಷಯ ತಿಳಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ರೈಲ್ವೆ ನೇಮಕಾತಿ ಮಂಡಳಿಯ ಮೂಲಕ ನೇಮಕಗೊಳ್ಳುವ ವ್ಯಕ್ತಿಗಳ ಸಂಖ್ಯೆ ಇಳಿಮುಖವಾಗಿದೆ ಮತ್ತು ಗುತ್ತಿಗೆ ನೌಕರರ ಸಂಖ್ಯೆ ಸ್ಥಿರವಾಗಿ ಹೆಚ್ಚುತ್ತಿದೆ ಎಂದು ಅವರು ನಿರಾಕರಿಸಿದರು.
ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಾರ್ವಜನಿಕ-ಖಾಸಗಿ ವಿಧಾನದ ಮೂಲಕ ಸಾಮಾನ್ಯ ಪ್ರಯಾಣಿಕರ ರೈಲುಗಳ ಕಾರ್ಯಾಚರಣೆಗೆ ಯಾವುದೇ ಪ್ರಸ್ತಾಪ ಪರಿಗಣನೆಯಲ್ಲಿಲ್ಲ ಎಂದು ಸ್ಪಷ್ಟಪಡಿಸಿದರು. ಭಾರತ್ ಗೌರವ್ ರೈಲುಗಳ ಬಗ್ಗೆ ಮಾತನಾಡಿದ ಸಚಿವರು, ಭಾರತ್ ಗೌರವ್ ರೈಲುಗಳ ಪೋರ್ಟಲ್ನಲ್ಲಿ 15 ಸೇವಾ ಪೂರೈಕೆದಾರರು ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 4 ಸೇವಾ ಪೂರೈಕೆದಾರರಿಗೆ ಭಾರತೀಯ ರೈಲ್ವೆಯು ಅವರ ಬೇಡಿಕೆಗೆ ಅನುಗುಣವಾಗಿ ರೇಕ್ ಗಳನ್ನು ಹಂಚಿಕೆ ಮಾಡಿದೆ ಅಂತ ತಿಳಿಸಿದರು.