ಬೆಂಗಳೂರು: ರಾಮಗಿರಿ, ಬೀರೂರು ಮತ್ತು ಆಲೂರು ನಿಲ್ದಾಣಗಳಲ್ಲಿ ಈ ಕೆಳಗಿನ ರೈಲುಗಳಿಗೆ ಇದ್ದ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ನೈಋತ್ಯ ರೈಲ್ವೆ ಮುಂದುವರಿಸಲು ನಿರ್ಧರಿಸಿದೆ.
ರೈಲು ಸಂಖ್ಯೆ 17325/17326 ಬೆಳಗಾವಿ-ಮೈಸೂರು-ಬೆಳಗಾವಿ ವಿಶ್ವಮಾನವ ಡೈಲಿ ಎಕ್ಸ್ ಪ್ರೆಸ್ ಮತ್ತು ರೈಲು ಸಂಖ್ಯೆ 17391/17392 ಕೆಎಸ್ಆರ್ ಬೆಂಗಳೂರು-ಎಸ್ಎಸ್ಎಸ್ ಹುಬ್ಬಳ್ಳಿ-ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್ ಪ್ರೆಸ್ ರೈಲುಗಳಿಗೆ ರಾಮಗಿರಿ ನಿಲ್ದಾಣದಲ್ಲಿ ಇರುವ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಅಕ್ಟೋಬರ್ 1 ರಿಂದ ಡಿಸೆಂಬರ್ 31, 2024 ರವರೆಗೆ ಮೂರು ತಿಂಗಳ ಕಾಲ ಮುಂದುವರಿಸಲಾಗುತ್ತಿದೆ.
ರೈಲು ಸಂಖ್ಯೆ 16587/16588 ಯಶವಂತಪುರ-ಬಿಕಾನೇರ್-ಯಶವಂತಪುರ ದ್ವಿ-ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲುಗಳಿಗೆ ಬೀರೂರು ನಿಲ್ದಾಣದಲ್ಲಿ ಇರುವ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆ ಅಕ್ಟೋಬರ್ 1 ರಿಂದ ಡಿಸೆಂಬರ್ 31, 2024 ರವರೆಗೆ ಮೂರು ತಿಂಗಳು ಮುಂದುವರಿಸಲಾಗುತ್ತಿದೆ.
ರೈಲು ಸಂಖ್ಯೆ 16515/16516 ಯಶವಂತಪುರ-ಕಾರವಾರ-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ ಪ್ರೆಸ್, ರೈಲು ಸಂಖ್ಯೆ 16575/16576 ಯಶವಂತಪುರ-ಮಂಗಳೂರು ಜಂಕ್ಷನ್-ಯಶವಂತಪುರ ಗೋಮಟೇಶ್ವರ ಟ್ರೈ-ವೀಕ್ಲಿ ಎಕ್ಸ್ ಪ್ರೆಸ್ ಮತ್ತು ರೈಲು ಸಂಖ್ಯೆ 16539/16540 ಯಶವಂತಪುರ-ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲುಗಳಿಗೆ ಆಲೂರು ನಿಲ್ದಾಣದಲ್ಲಿದ್ದ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ನವೆಂಬರ್ 30 ರವರೆಗೆ ಮುಂದುವರಿಸಲಾಗಿದೆ.
ಬಳ್ಳಾರಿ ಜಿಲ್ಲೆಯ 59 ಗ್ರಾಮಗಳು ಪ್ರಧಾನಮಂತ್ರಿ ಜನಜಾತಿ ಉನ್ನತ ಗ್ರಾಮ ಅಭಿಯಾನಕ್ಕೆ ಆಯ್ಕೆ – DC
BREAKING : ತಿರುಪತಿ ಲಡ್ಡು ವಿವಾದ : ವಿಚಾರಣೆಯನ್ನು ಅ.3ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್! | Tirupati Laddu Row