ಬೆಂಗಳೂರು: ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಹುಬ್ಬಳ್ಳಿ ಮತ್ತು ರಾಮೇಶ್ವರಂ ನಡುವೆ ಸಾಪ್ತಾಹಿಕ ವಿಶೇಷ ರೈಲು ಸಂಚಾರದ ವ್ಯವಸ್ಥೆ ಮಾಡಲಾಗಿದೆ.
ಯಶವಂತಪುರ ಬೈಪಾಸ್ ಮೂಲಕ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ರಾಮೇಶ್ವರಂ ನಿಲ್ದಾಣಗಳ ನಡುವೆ ಸಾಪ್ತಾಹಿಕ ವಿಶೇಷ ರೈಲುಗಳ ಸಂಚಾರ ಆರಂಭ. ಅವುಗಳ ಮಾಹಿತಿ ಈ ಕೆಳಗಿನಂತಿವೆ:
1. ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿ-ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಏಪ್ರಿಲ್ 6, 2024 ರಿಂದ ಜೂನ್ 29, 2024 ರವರೆಗೆ ಪ್ರತಿ ಶನಿವಾರ ಬೆಳಿಗ್ಗೆ 6:30 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು ಮರುದಿನ ಬೆಳಿಗ್ಗೆ 6:15 ಕ್ಕೆ ರಾಮೇಶ್ವರಂ ನಿಲ್ದಾಣವನ್ನು ತಲುಪಲಿದೆ.
2. ರೈಲು ಸಂಖ್ಯೆ 07356 ರಾಮೇಶ್ವರಂ-ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಏಪ್ರಿಲ್ 7, 2024 ರಿಂದ ಜೂನ್ 30, 2024 ರವರೆಗೆ ಪ್ರತಿ ಭಾನುವಾರ ರಾತ್ರಿ 9 ಗಂಟೆಗೆ ರಾಮೇಶ್ವರಂ ನಿಲ್ದಾಣದಿಂದ ಹೊರಟು ಮರುದಿನ ಸಂಜೆ 07:25 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ.
ಈ ವಿಶೇಷ ರೈಲುಗಳು ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಬೀರೂರು, ಅರಸೀಕೆರೆ, ತುಮಕೂರು, ಬಾಣಸವಾಡಿ, ಹೊಸೂರು, ಧರ್ಮಪುರಿ, ಸೇಲಂ, ನಮಕ್ಕಲ್, ಕರೂರ್, ತಿರುಚಿರಾಪಳ್ಳಿ, ಪುದುಕ್ಕೊಟ್ಟೈ, ಕಾರೈಕುಡಿ, ಮನಮದುರೈ ಮತ್ತು ರಾಮನಾಥಪುರಂ ನಿಲ್ದಾಣಗಳಲ್ಲಿ ನಿಲುಗಡೆ ಇರಲಿವೆ.
ಈ ವಿಶೇಷ ರೈಲಿನಲ್ಲಿ ಎಸಿ-2 ಟೈಯರ್-1, ಎಸಿ-3 ಟೈಯರ್-3, ಸ್ಲೀಪರ್ ಕ್ಲಾಸ್ ಕೋಚ್-9, ಜನರಲ್ ಸೆಕೆಂಡ್ ಕ್ಲಾಸ್ ಕೋಚ್-5 ಮತ್ತು ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ಬ್ರೇಕ್ ವ್ಯಾನ್/ಅಂಗವಿಕಲ ಕೋಚ್-2 ಸೇರಿದಂತೆ ಒಟ್ಟು 20 ಬೋಗಿಗಳಿವೆ.
ಸೂಚನೆ: ರೈಲುಗಳ ಸಂಖ್ಯೆ 07355/07356 ಎಸ್ಎಸ್ಎಸ್ ಹುಬ್ಬಳ್ಳಿ-ರಾಮೇಶ್ವರಂ-ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಯಶವಂತಪುರ ಬೈಪಾಸ್ ಮೂಲಕ ಸಂಚರಿಸಲಿದೆ.
BREAKING : ಬಾಗಲಕೋಟೆ : ವಿದ್ಯಾರ್ಥಿನಿ ಮೇಲೆ ‘ಕಳ್ಳತನ’ ಆರೋಪ : ಮನನೊಂದ ಬಾಲಕಿ ‘ನೇಣಿಗೆ’ ಶರಣು