ಬೆಂಗಳೂರು: ಬೆಂಗಳೂರು ವಿಭಾಗದ ಪೆನುಕೊಂಡ-ಮಕ್ಕಾಜಿಪಲ್ಲಿ ನಿಲ್ದಾಣಗಳ ನಡುವೆ ಇಂಜಿನಿಯರಿಂಗ್ ಮತ್ತು ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಹಿನ್ನಲೆ, ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದು ಮತ್ತು ಬದಲಾದ ಮಾರ್ಗದ ಮೂಲಕ ಸಂಚರಿಸಲಾಗುತ್ತದೆ. ಅವುಗಳು ಈ ಕೆಳಗಿನಂತಿವೆ:
ಈ ರೈಲುಗಳ ಸಂಚಾರ ಭಾಗಶಃ ರದ್ದು:
1. ರೈಲು ಸಂಖ್ಯೆ 06515 ಕೆಎಸ್ಆರ್ ಬೆಂಗಳೂರು-ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ ಮೆಮು ವಿಶೇಷ ರೈಲು ಸೆಪ್ಟೆಂಬರ್ 5, 10, 11 ಮತ್ತು 12, 2024 ರಂದು ಹಿಂದೂಪುರ-ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಹಿಂದೂಪುರದಲ್ಲಿ ಕೊನೆಗೊಳ್ಳುತ್ತದೆ.
2. ರೈಲು ಸಂಖ್ಯೆ 06516 ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ-ಕೆಎಸ್ಆರ್ ಬೆಂಗಳೂರು ಮೆಮು ವಿಶೇಷ ರೈಲು ಸೆಪ್ಟೆಂಬರ್ 5, 10, 11 ಮತ್ತು 12, 2024 ರಂದು ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ-ಹಿಂದೂಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ ನಿಲ್ದಾಣದ ಬದಲು ಹಿಂದೂಪುರದಿಂದ ನಿಗದಿತ ನಿರ್ಗಮನ ಸಮಯದಲ್ಲಿ ತನ್ನ ಪ್ರಯಾಣವನ್ನು ಪ್ರಾರಂಭಿಸುತ್ತದೆ.
3. ರೈಲು ಸಂಖ್ಯೆ 07693 ಗುಂತಕಲ್-ಹಿಂದೂಪುರ ಡೆಮು ವಿಶೇಷ ರೈಲು ಸೆಪ್ಟೆಂಬರ್ 9 ರಿಂದ 11, 2024 ರವರೆಗೆ ಧರ್ಮಾವರಂ-ಹಿಂದೂಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ. ಈ ರೈಲು ಧರ್ಮಾವರಂನಲ್ಲಿ ಕೊನೆಗೊಳ್ಳುತ್ತದೆ.
4. ರೈಲು ಸಂಖ್ಯೆ 07694 ಹಿಂದೂಪುರ-ಗುಂತಕಲ್ ಡೆಮು ವಿಶೇಷ ರೈಲು ಸೆಪ್ಟೆಂಬರ್ 10 ರಿಂದ 12, 2024 ರವರೆಗೆ ಹಿಂದೂಪುರ ನಿಲ್ದಾಣದ ಬದಲು ಧರ್ಮಾವರಂನಿಂದ ನಿಗದಿತ ನಿರ್ಗಮನ ಸಮಯದಲ್ಲಿ ತನ್ನ ಪ್ರಯಾಣವನ್ನು ಪ್ರಾರಂಭಿಸುತ್ತದೆ. ಹೀಗಾಗಿ ಹಿಂದೂಪುರ-ಧರ್ಮಾವರಂ ನಿಲ್ದಾಣಗಳ ನಡುವೆ ರದ್ದುಗೊಂಡಿರುತ್ತದೆ.
ರೈಲುಗಳ ಮಾರ್ಗ ಬದಲಾವಣೆ:
1. ಸೆಪ್ಟೆಂಬರ್ 5 ಮತ್ತು 12, 2024 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 20703 ಕಾಚಿಗುಡ-ಯಶವಂತಪುರ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಧರ್ಮಾವರಂ, ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಯಶವಂತಪುರ ನಿಲ್ದಾಣಗಳ ಮೂಲಕ ಸಂಚರಿಸಲಿದೆ.
2. ಸೆಪ್ಟೆಂಬರ್ 5 ಮತ್ತು 12, 2024 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 22231 ಕಲಬುರಗಿ-ಎಸ್ಎಂವಿಟಿ ಬೆಂಗಳೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಅನಂತಪುರ, ಧರ್ಮಾವರಂ, ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಯಲಹಂಕ ನಿಲ್ದಾಣಗಳ ಮೂಲಕ ಸಂಚರಿಸಲಿದೆ.
3. ಸೆಪ್ಟೆಂಬರ್ 9, 2024 ರಂದು ಹೊರಡುವ ರೈಲು ಸಂಖ್ಯೆ 12976 ಜೈಪುರ-ಮೈಸೂರು ಎಕ್ಸ್ ಪ್ರೆಸ್ ರೈಲು ಧರ್ಮಾವರಂ, ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಹಿಂದೂಪುರ ನಿಲ್ದಾಣಗಳ ಮೂಲಕ ಸಂಚರಿಸಲಿದೆ.
4. ಸೆಪ್ಟೆಂಬರ್ 10 ಮತ್ತು 11, 2024 ರಂದು ಹೊರಡುವ ರೈಲು ಸಂಖ್ಯೆ 16572 ಬೀದರ್-ಯಶವಂತಪುರ ಎಕ್ಸ್ ಪ್ರೆಸ್ ರೈಲು ಧರ್ಮಾವರಂ, ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಹಿಂದೂಪುರ ನಿಲ್ದಾಣಗಳ ಮೂಲಕ ಸಂಚರಿಸಲಿದೆ.
5. ಸೆಪ್ಟೆಂಬರ್ 10 ಮತ್ತು 11, 2024 ರಂದು ಹೊರಡುವ ರೈಲು ಸಂಖ್ಯೆ 16593 ಕೆಎಸ್ಆರ್ ಬೆಂಗಳೂರು-ನಾಂದೇಡ್ ಎಕ್ಸ್ ಪ್ರೆಸ್ ರೈಲು ಪೆನುಕೊಂಡ, ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ & ಧರ್ಮಾವರಂ ನಿಲ್ದಾಣಗಳ ಮೂಲಕ ಸಂಚರಿಸಲಿದೆ.
BREAKING: ನಾನಾಗಲೀ, ನನ್ನ ಕುಟುಂಬದವರಾಗಲೀ, ಸರ್ಕಾರದಿಂದ ಒಂದೂ ನಿವೇಶನ ಪಡೆದಿಲ್ಲ: ಸಚಿವ ಎಂ.ಬಿ ಪಾಟೀಲ್ ಸ್ಪಷ್ಟನೆ
ಬೆಂಗಳೂರಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ: ಏಕಾಂತದಲ್ಲಿದ್ದ ಪ್ರೇಮಿಗಳಿಗೆ ಕಿರುಕುಳ, ಯುವಕನಿಗೆ ಗೂಸಾ
BREAKING : ‘ಮನಿ ಲಾಂಡರಿಂಗ್’ ಕೇಸ್ : ‘ED’ ಯಿಂದ AAP ಶಾಸಕ ‘ಅಮಾನತುಲ್ಲಾ ಖಾನ್’ ಅರೆಸ್ಟ್!
ಏನಿದು ‘ಚುಂಬನ ಕಾಯಿಲೆ’.? ಹೇಗೆ ಹರಡುತ್ತೆ.? ಲಕ್ಷಣಗಳೇನು.? ಚಿಕಿತ್ಸೆ ಹೇಗೆ.? ಇಲ್ಲಿದೆ ಮಾಹಿತಿ.!