ಬೆಂಗಳೂರು: ಕಳೆದ ಒಂದು ವಾರದಿಂದ ಸುಮ್ಮನಾಗಿದ್ದ ಮಳೆ ಮತ್ತೆ ಅಬ್ಬರವನ್ನು ಶುರು ಮಾಡಿದ್ದು, ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಮಾನ ಇಲಾಖೆಯ ಪ್ರಕಾರ ದಕ್ಷಿಣ ಒಳನಾಡಿಗೆ ಮುಂಗಾರು ಚುರುಕಾಗಿದ್ದು ಯಲ್ಲೋ ಅಲರ್ಟ್ ನೀಡಿದ್ದು, ಬೆಂಗಳೂರಿಗೆ ಇನ್ನು 5 ದಿನ ಮಳೆ ಇರಲಿದೆ.