ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಇದರಿಂದ ಜನರು ರೋಸಿ ಹೋಗಿದ್ದಾರೆ. ಇದೀಗ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದೀಗ ಬೆಂಗಳೂರು ವ್ಯಾಪ್ತಿಯಲ್ಲಿ ಅಕ್ಟೋಬರ್ 20ರಂದು ಗುರುವಾರ ಮತ್ತೆ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬೆಂಗಳೂರು ನಗರ ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ಗುಡುಗು ಮಿಂಚು ಸಹಿತ ಧಾರಾಕಾರವಾಗಿ ಮಳೆ ಆಗುವ ಸಾಧ್ಯತೆಯಿದ್ದು, ನಗರದಾದ್ಯಂತ ಮೋಡ ಕವಿದ ವಾತಾವರಣ, ತಂಪು ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಾರ್ವಜನಿಕರ ಗಮನಕ್ಕೆ: ಈ ಎಲ್ಲಾ ‘ದಾಖಲೆ’ಗಳು ಕಳೆದ್ರೇ, ಹೀಗೆ ದೂರು ದಾಖಲಿಸಿ | Karnataka Police
40 ವರ್ಷಗಳ ನಂತರ ಕೋಡಿ ಬಿದ್ದ ‘ಐತಿಹಾಸಿಕ ಧರ್ಮಪುರ ಕೆರೆ’: ‘ಡಿಜೆ’ ಹಾಡಿಗೆ ಕುಣಿದು ಕುಪ್ಪಳಿಸಿದ ಜನರು