ಬೆಂಗಳೂರು : ಈಗಾಗಲೇ ಫೆಂಗಲ್ ಚಂಡಮಾರುತದ ಪರಿಣಾಮದಿಂದ ರಾಜ್ಯದ ಅನೇಕ ಕಡೆಗಳಲ್ಲಿ ಅವಾಂತರ ಸೃಷ್ಟಿಯಾಗಿವೆ, ಇದರ ಬೆನ್ನಲ್ಲೇ ಮುಂದಿನ ಎರಡು ವಾರಗಳ ಕಾಲ ಮಂಗಳ ಕೊಲ್ಲಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ಇದರ ಪ್ರಭಾವದಿಂದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 14 ಮತ್ತು 15 ರಂದು ಮಳೆಯಾಗಲಿದೆ. 2 ನೇ ವಾಯುಭಾರ ಕುಸಿತ ಡಿಸೆಂಬರ್ 16 ಕ್ಕೆ ಉಂಟಾಗಲಿದ್ದು, ಡಿಸೆಂಬರ್ 17 – 18 ಕ್ಕೆ ಜೋರು ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.
ಕಳೆದ ಒಂದು ವಾರ ಫೆಂಗಲ್ ಚಂಡಮಾರುತ ಅಬ್ಬರಕ್ಕೆ ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಜನ ಕಂಗಾಲಾಗಿದ್ದಾರೆ.ಕಳೆದ ಒಂದು ವಾರ ಪೂರ್ತಿ ದಕ್ಷಿಣ ಕರ್ನಾಟಕ ಜಿಲ್ಲೆಗಳು, ಕರಾವಳಿಯ ಮೂರು ಜಿಲ್ಲೆಗಳ ಮಳೆ, ಗಾಳಿ, ಚಳಿ ಹೆಚ್ಚಿತ್ತು. ಈ ಫೆಂಗಲ್ ಚಂಡಮಾರುತದ ಹಾನಿಯಿಂದ ಇದೀಗ ಜನ ಚೇತರಿಸಿಕೊಳ್ಳುವ ವೇಳೆ ಮತ್ತೆ ಎರಡು ಸೈಕ್ಲೋನ್ ಸೃಷ್ಟಿಯಾಗುವ ಲಕ್ಷಣ ಕಂಡುಬಂದಿದೆ.