ಬೆಂಗಳೂರು : ಬಿಸಿಲಿನ ಬೇಗೆಗೆ ತತ್ತರಿಸಿರುವ ಜನತೆಗೆ ಹವಾಮಾನ ಇಲಾಖೆ ನೆಮ್ಮದಿ ಸುದ್ದಿ ನೀಡಿದ್ದು, ಬೆಂಗಳೂರು ಸೇರಿದಂತೆ ಹಲವಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಹೌದು, ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯದ 12 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಮೈಸೂರು, ಮಂಡ್ಯ, ಕೋಲಾರ, ಕೊಡಗು. ಹಾಸನ, ಚಿಕ್ಕಮಗಳೂರು. ಚಿಕ್ಕಬಳ್ಳಾಪುರ, ಚಾಮರಾಜನಗರ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಎರಡು ದಿನಗಳ ಹಿಂದಷ್ಟೇ ಮೈಸೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗಿತ್ತು. ಕೆ.ಆರ್ ನಗರ ತಾಲೂಕಿನ ವಿವಿಧೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಮಳೆಯಾಗಿದ್ದು, ಬೆಂಗಳೂರಿನ ಹಲವು ಕಡೆ ಮಳೆಯಾಗಿದೆ. ಇದೀಗ ರಾಜ್ಯದ 12 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.