ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅ.26ರಂದು ಮಳೆಯಾಗಲಿದೆ. ಇಂದಿನಿಂದ ಒಂದು ವಾರ ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ಮಂಡ್ಯ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ನೀಡಿದೆ.
ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಚಾಮರಾಜನಗರ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಕೆಲವು ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.