ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತದ ಪರಿಣಾಮ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆ ಸೇರಿದಂತೆ ಹಲವು ಜಿಲ್ಲಾ ವ್ಯಾಪ್ತಿಯಲ್ಲಿ ಇನ್ನೂ 3 ದಿನ ಗುಡುಗು ಸಹಿತ ಸಾಮಾನ್ಯ ಮಳೆಯಾಗುವ ಮುನ್ಸೂಚನೆ ಇದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯು ಭಾರ ಕುಸಿತದಿಂದಾಗಿ ಮಂಗಳವಾರ ರಾತ್ರಿ ಹಾಗೂ ಬುಧವಾರ ಮಂಡ್ಯ, ಕೊಡಗು ಹಾಗೂ ಹಾವೇರಿ ಜಿಲ್ಲೆಯ ವಿವಿಧೆಡೆ ಮಳೆ ಆಗಿದೆ. ಮಂಡ್ಯ ಜಿಲ್ಲೆಯಲ್ಲಿ 7.6 ಮಿ.ಮೀ. ಮಳೆ ಆಗಿದೆ. ಇನ್ನು ಕೊಡಗು, ಹಾವೇರಿ, ಚಾಮರಾಜನಗರ ಜಿಲ್ಲೆಯ ವಿವಿಧ ಕಡೆಗಳಲ್ಲಿ ಬುಧವಾರ ಕೆಲ ಕಾಲ ಮಳೆ ಆಗಿದೆ.








