ಬೆಂಗಳೂರು : ರಾಜ್ಯದಲ್ಲಿ ಪೂರ್ವ ಮುಂಗಾರು ಮಲೆ ಆರ್ಭಟಿಸಲಿದೆ. ಬಿರುಗಾಳಿ, ಆಲಿಕಲ್ಲು ಸಹಿತ, ಗುಡುಗು ಮಿಂಚಿನೊಂದಿಗೆ ಕರಾವಳಿ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಮಳೆ ಆರ್ಭಟಿಸಲಿದೆ. ಏಪ್ರಿಲ್ 5 ರಿಂದ ಬೆಂಗಳೂರು ನಗರ ಸುತ್ತಮುತ್ತಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಲಿಕಲ್ಲು ಮಳೆ ಮತ್ತು ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನು ಕರಾವಳಿ ಕರ್ನಾಟಕ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಚಿಂತಾಮಣಿ, ಮಂಡ್ಯ, ಮೈಸೂರು, ಮಡಿಕೇರಿಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆ, ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಆಲಿಕಲ್ಲು ಮಳೆಯೊಂದಿಗೆ ಹಗುರ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ.