ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದಾಗಿ ಬೆಂಗಳೂರು ನಗರದಲ್ಲಿ ಡಿಸೆಂಬರ್ 11ರವರೆಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮಾಹಿತಿ ನೀಡಿದೆ.
ಬೆಂಗಳೂರು ನಗರದಲ್ಲಿ ಡಿಸೆಂಬರ್ 11 ರವರೆಗೆ ಮಳೆ ಸಾಧ್ಯತೆ ಇದೆ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ ಹಾಗೂ ಚಾಮರಾಜನಗರದಲ್ಲಿ ಮೋಡ ಕವಿದ ವಾತಾವರಣವಿದೆ.
ಡಿಸೆಂಬರ್ 3ರಿಂದ 11ರ ವರೆಗೆ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಚಿಕ್ಕಮಗಳೂರು, ಹಾಸನ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯು ಭಾರ ಕುಸಿತದ ಪರಿಣಾಮ, ಚೆನ್ನೈ, ನಾಗಪಟ್ಟಣ ಸೇರಿದಂತೆ ತಮಿಳುನಾಡಿನಾದ್ಯಂತ ಭಾರಿ ಮಳೆಯಾಗಿದೆ. ತಮಿಳುನಾಡು, ಪುದುಚೇರಿ ಮತ್ತು ಆಂಧ್ರದಲ್ಲಿ ತೀವ್ರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.