ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಡಿ.29ರ ಇಂದು ರಾಜ್ಯದ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಅಂತ ತಿಳಿಸಿದೆ. ಬೆಂಗಳೂರು, ಮಂಡ್ಯ, ದಾವಣಗೆರೆ, ರಾಮನಗರ, ತುಮಕೂರು, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡು ಹಾಗೂ ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಇಂದು ಸಹ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.