ಬೆಂಗಳೂರು : ದಿತ್ವಾ ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದು, ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತದ ಪರಿಣಾಮ ಇದೀಗ ದಿತ್ವಾ ಚಂಡಮಾರುತವಾಗಿ ಮಾರ್ಪಾಡಾಗಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಲ್ಲಿ ಹಗುರ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಕೆಲವೆಡೆ ಮೋಡ ಕವಿದ ವಾತಾವರಣ ಕಂಡು ಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.








