Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM

ದೇಶದಲ್ಲಿ ವಿಚ್ಛೇದನ ಪ್ರಕರಣ ಹೆಚ್ಚಳ.! ಭಾರತದಲ್ಲಿ ಈ ರಾಜ್ಯವೇ ನಂಬರ್ ಒನ್, ಕರ್ನಾಟಕಕ್ಕೆ 2ನೇ ಸ್ಥಾನ!

04/07/2025 9:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain Alert : `ಫೆಂಗಲ್ ಸೈಕ್ಲೋನ್’ ಎಫೆಕ್ಟ್ : ಇಂದು ರಾಜ್ಯದ ಈ 10 ಜಿಲ್ಲೆಗಳ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ.!
KARNATAKA

Rain Alert : `ಫೆಂಗಲ್ ಸೈಕ್ಲೋನ್’ ಎಫೆಕ್ಟ್ : ಇಂದು ರಾಜ್ಯದ ಈ 10 ಜಿಲ್ಲೆಗಳ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ.!

By kannadanewsnow5703/12/2024 5:09 AM

ಬೆಂಗಳೂರು : ರಾಜ್ಯಾಧ್ಯಂತ ಬಂಗಾಲಕೊಳ್ಳಿಯಲ್ಲಿ ಎದ್ದಿರುವಂತ ಫೆಂಗಲ್ ಚಂಡಮಾರುತದ ಕಾರಣ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಚಳಿಗಾಳಿ ಸಹಿತ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಫೆಂಗಲ್ ಚಂಡಮಾರುತದ ಕಾರಣ ಇಂದು ರಾಜ್ಯದ ಕೆಲ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಇಂದು ರಾಜ್ಯದ ಹಲವಡೆ ಭಾರೀ ಮಳೆ, 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಹಲವಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು, ಕೋಲಾರ, ತುಮಕೂರು ಸೇರಿ ಇತರೆ ಜಿಲ್ಲೆಗಳಲ್ಲಿ ಮೋಡ ಕವಿತ ವಾತಾವರಣದ ಜೊತೆಗೆ ಸಾಮಾನ್ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮೈಸೂರು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಇಂದು ಮೈಸೂರು ಜಿಲ್ಲೆಯ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ.

ಇಂದು ಮೈಸೂರು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆಯನ್ನು ನೀಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ಮಾತ್ರ ರಜೆ

ಫೆಂಗಲ್ ಚಂಡಮಾರುತದ ಕಾರಣ ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆಯನ್ನು ಘೋಷಿಸಿ ಡಿಸಿ ಆದೇಶಿಸಿದ್ದಾರೆ. ಕೇವಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮಾತ್ರವೇ ಇಂದು ರಜೆ ನೀಡಲಾಗಿದೆ. ಇನ್ನುಳಿದಂತೆ ಕಾಲೇಜುಗಳು ಎಂದಿನಂತೆ ನಡೆಯಲಿವೆ ಅಂತ ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ.

ಕೋಲಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ

ಫೆಂಗಲ್ ಚಂಡಮಾರುತದ ಕಾರಣ ಶಾಲಾ-ಕಾಲೇಜುಗಳಿಗೆ ಕೋಲಾರ ಜಿಲ್ಲೆಯಲ್ಲಿ ರಜೆ ಘೋಷಿಸಿ ಡಿಸಿ ಅಕ್ರಂ ಪಾಷಾ ಆದೇಶಿಸಿದ್ದರು. ಇಂದೂ ಕೂಡ ಚಂಡಮಾರುತದ ಕಾರಣ ಮಳೆ, ಚಳಿಗಾಳಿ ಬೀಸುವ ಮುನ್ಸೂಚನೆಯನ್ನು ಆರೋಗ್ಯ ಇಲಾಖೆ ನೀಡಿರುವ ಕಾರಣ, ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.

ಕೊಡಗು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಈ ಸಂಬಂಧ ಡಿಸಿ ವೆಂಕಟರಾಜಾ ಅವರು ಆದೇಶಿಸಿದ್ದು, ಫೆಂಗಲ್ ಚಂಡಮಾರುತದ ಕಾರಣ ಇಂದು ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ನೀಡಿರುವುದಾಗಿ ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ

ಇಂದು ಮಂಡ್ಯ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೂ ರಜೆಯನ್ನು ಘೋಷಿಸಲಾಗಿದೆ. ಈ ಕುರಿತಂತೆ ಡಿಸಿ ಡಾ.ಕುಮಾರ್ ಆದೇಶಿಸಿದ್ದು, ಇಂದು ಫೆಂಗಲ್ ಚಂಡಮಾರುತದ ಕಾರಣ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಅಂತ ಹೇಳಿದ್ದಾರೆ.

ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

ಇಂದು ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ನೀಡಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರ್ ಆದೇಶಿಸಿದ್ದಾರೆ. ಹವಾಮಾನ ಇಲಾಖೆಯು ಇಂದು ಆರೆಂಜ್ ಅಲರ್ಟ್ ನೀಡಿದೆ. ಈ ಮುನ್ಸೂಚನೆಯಿಂದ ಭಾರೀ ಮಳೆಯಾಗುವ ಕಾರಣ ಇಂದು ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ನೀಡಲಾಗಿದೆ ಎಂದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ

ಈ ಕುರಿತಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದು, ಇಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಅನ್ನು ಹವಾಮಾನು ಇಲಾಖೆ ಘೋಷಿಸಿದೆ. ಶಾಲಾ ವಿದ್ಯಾರ್ಥಿಗಳ ಆರೋಗ್ಯದ ಕಾರಣ, ಫೆಂಗಲ್ ಚಂಡಮಾರುತದ ಕುಳಿರ್ ಗಾಳಿಯ ಕಾರಣ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಅಂತ ಹೇಳಿದ್ದಾರೆ.

ಚಾಮರಾಜನಗರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ, ಪದವಿ ಕಾಲೇಜುಗಳಿಗೆ ಇಲ್ಲ

ಇಂದು ಚಾಮರಾಜನಗರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಆದರೇ ಪದವಿ ತರಗತಿಗೆ ಪರೀಕ್ಷೆ ನಡೆಯುತ್ತಿರುವುದರಿಂದ ರಜೆಯನ್ನು ನೀಡಲಾಗಿಲ್ಲ.

Rain Alert : `ಫೆಂಗಲ್ ಸೈಕ್ಲೋನ್' ಎಫೆಕ್ಟ್ : ರಾಜ್ಯದಲ್ಲಿ 3-4 ದಿನ ಭಾರೀ ಮಳೆ Rain Alert: 'Fungal Cyclone' effect: Schools and colleges in these 10 districts of the state will remain closed today
Share. Facebook Twitter LinkedIn WhatsApp Email

Related Posts

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM2 Mins Read

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM1 Min Read

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM1 Min Read
Recent News

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM

ದೇಶದಲ್ಲಿ ವಿಚ್ಛೇದನ ಪ್ರಕರಣ ಹೆಚ್ಚಳ.! ಭಾರತದಲ್ಲಿ ಈ ರಾಜ್ಯವೇ ನಂಬರ್ ಒನ್, ಕರ್ನಾಟಕಕ್ಕೆ 2ನೇ ಸ್ಥಾನ!

04/07/2025 9:42 PM

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM
State News
KARNATAKA

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

By kannadanewsnow0904/07/2025 9:44 PM KARNATAKA 2 Mins Read

ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ…

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.