ಬೆಂಗಳೂರು : ಮಾರ್ಚ್ 31ರಿಂದ ಅಂದರೆ ನಾಳೆಯಿಂದ ರಾಜ್ಯಾದ್ಯಂತ ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆಯು ಮಹತ್ವದ ಮುನ್ಸೂಚನೆ ನೀಡಿದೆ.ಏಪ್ರಿಲ್ 3ರಂದು ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಸಾಧ್ಯತೆ ಎಂದು ತಿಳಿಸಿದ್ದು, ಏಪ್ರಿಲ್ 4 & 5ರಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವವಿದೆ ಎಂದು ತಿಳಿಸಿದೆ.
ಏಪ್ರಿಲ್ 3ರಂದು ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಅತಿ ವೇಗದ ಗಾಳಿಯೊಂದಿಗೆ ಆಲಿಕಲ್ಲು ಮಳೆಯಾಗಲಿದೆ.ಶನಿವಾರ ದಕ್ಷಿಣ ಒಳನಾಡು ಮತ್ತು ಕರಾವಳಿಯ ಕೆಲವೆಡೆ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಮಾತ್ರ ಎಂದಿನಂತೆ ಒಣ ಹವೆ ಇತ್ತು.
ಏಪ್ರಿಲ್ 4 ಮತ್ತು ಏಪ್ರಿಲ್ 5ರಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಹಾಗೂ ಉತ್ತರ ಒಳನಾಡಿನಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.