ಬೆಂಗಳೂರು: ರಾಜ್ಯಾದ್ಯಂತ ಮಳೆ ಮುಂದುವರೆದಿದ್ದು, ಆ.15 ರಿಂದ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾನುವಾರ ಭಾರೀ ಮಳೆಯಾಗಿದೆ. ರಾಜ್ಯಾದ್ಯಂತ ಆಗಸ್ಟ್.15ರ ರ ನಂತರ ಭಾರೀ ಮಳೆಯಾಗಲಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಹೆಚ್ಚಾಗಿ ಮಳೆಯಾಗುವ ಕಾರಣ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಚಿಕ್ಕಬಳ್ಳಾಪುರ, ತುಮಕೂರಿನಲ್ಲಿ ಇಂದು ಬಿರುಸಾಗಿ ಮಳೆಯಾಗುವ ಸಂಭವ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ತಿಳಿಸಿದೆ.