ಬೆಂಗಳೂರು : ರಾಜ್ಯಾದ್ಯಂತ ಇಂದಿನಿಂದ ಮಳೆ ಮತ್ತಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಹೆಚ್ಚಾಗಿದೆ. ಹಾಗಾಗಿ, ದೇಶದ ಬಹುತೇಕ ಕಡೆಗಳಲ್ಲಿ ವರ್ಷಧಾರೆ ಮುಂದುವರೆದಿದ್ದು, ಕರ್ನಾಟಕದಲ್ಲೂ ವರುಣನ ಆರ್ಭಟ ಜೋರಾಗಿದೆ.
ಆಗಸ್ಟ್ 19ರ ನಂತರ ಮಳೆ ಮತ್ತಷ್ಟು ಹೆಚ್ಚಾಗಲಿರುವ ಕಾರಣ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.