ಬೆಂಗಳೂರು: ಸೇರಿದಂತೆ ರಾಜ್ಯಾದ್ಯಂತ ಇಂದು ಭಾರಿ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚೆ ನೀಡಿದೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ಹವಾಮಾನ ಇಲಾಖೆಯೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮೈಸೂರು, ಮಂಡ್ಯ, ಬೀದರ್, ಧಾರವಾಡ, ಗದಗ, ಕೊಪ್ಪಳ, ಕಲಬುರ್ಗಿ, ಬಳ್ಳಾರಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮೈಸೂರು, ಮಂಡ್ಯ, ಬೀದರ್, ಧಾರವಾಡ, ಗದಗ, ಕೊಪ್ಪಳ, ಕಲಬುರ್ಗಿ, ಬಳ್ಳಾರಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.