ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನವೆಂಬರ್ 5 ರ ನಾಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವೆಂಬರ್ 5 ರಿಂದ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಜನರು ಮತ್ತು ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ನಾಳೆಯಿಂದ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
		







